ಬೆಂಗಳೂರು: ಕಾಕ್ರೋಚ್ ಜನತಾ ಪಾರ್ಟಿಯಿಂದ(ಸಿಜೆಪಿ) ನಗರದ ಟೌನ್ಹಾಲ್ ಬಳಿ ಮೇ 24ರಂದು ‘ಶಾಂತಿಯುತ ಮಾನವ ಸರಪಳಿ ನಿರ್ಮಾಣ’ ಎನ್ನುವ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಟೌನ್ಹಾಲ್ ಎದುರು ಯಾವುದೇ ಮಾನವ ಸರಪಳಿ ನಿರ್ಮಾಣಕ್ಕೆ ಅವಕಾಶ ಇಲ್ಲ ಎಂದು ನಗರ ಪೊಲೀಸ್ ಕಮಿಷನರ್ ಸೀಮಾಂತ್ಕುಮಾರ್ ಸಿಂಗ್ ತಿಳಿಸಿದ್ದಾರೆ.

ಕಾಕ್ರೋಚ್ ಜನತಾ ಪಾರ್ಟಿ ಕರ್ನಾಟಕ ಶೀರ್ಷಿಕೆ ಅಡಿ ಪೋಸ್ಟ್ ಹೊರಡಿಸಲಾಗಿದೆ. ಮಾನವ ಸರಪಳಿ ನಿರ್ಮಿಸುವ ಸಲುವಾಗಿ ಟೌನ್ಹಾಲ್ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಸೇರಲು ಆಹ್ವಾನ ನೀಡಲಾಗಿದೆ. ಟೌನ್ಹಾಲ್ ಬಳಿ ಅಂತಹ ಕಾರ್ಯಕ್ರಮ ಹಮ್ಮಿಕೊಳ್ಳಲು ಯಾವುದೇ ವ್ಯಕ್ತಿ, ಸಂಘಟನೆ, ಪಕ್ಷದಿಂದ ಅನುಮತಿ ಕೋರಿದ ಅರ್ಜಿ ಬಂದಿಲ್ಲ. ಅಧಿಕೃತ ಅನುಮತಿಯನ್ನೂ ಪೊಲೀಸ್ ಇಲಾಖೆ ನೀಡಿಲ್ಲ. ಜಿಬಿಎ ಕಚೇರಿಯಿಂದಲೂ ಯಾವುದೇ ಅನುಮತಿ ಪಡೆದಿಲ್ಲ ಎಂದು ಅವರು ತಿಳಿಸಿದ್ದಾರೆ.

ಫ್ರೀಡಂಪಾರ್ಕ್ ಹೊರತು ಪಡಿಸಿ ಬೇರೆ ಯಾವುದೇ ಸ್ಥಳಗಳಲ್ಲಿ ಧರಣಿ, ಪ್ರತಿಭಟನೆ ರ್ಯಾಲಿ ನಡೆಸುವುದಕ್ಕೆ ಹೈಕೋರ್ಟ್ ಆದೇಶದ ಅನ್ವಯ ಅವಕಾಶ ಇರುವುದಿಲ್ಲ. ಟೌನ್ಹಾಲ್ ಬಳಿ ಜನರು ಬಂದು ಸೇರುವುದು ನ್ಯಾಯಾಲಯದ ಆದೇಶದ ಉಲ್ಲಂಘನೆ ಆಗಲಿದೆ ಎಂದು ಎಚ್ಚರಿಸಿದ್ದಾರೆ.

ಸಾರ್ವಜನಿಕರು ಈ ಸಂದೇಶವನ್ನು ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್, ವಾಟ್ಸ್ಆ್ಯಪ್, ಇನ್ಸ್ಟಾಗ್ರಾಂ, ಟ್ವಿಟರ್ಗಳ ಮೂಲಕ ಮತ್ತೊಬ್ಬರಿಗೆ ಪೋಸ್ಟ್ ಮಾಡದಂತೆ ಹಾಗೂ ಟೌನ್ಹಾಲ್ ಬಳಿ ಬಂದು ಗುಂಪು ಸೇರಿದಂತೆ ಪೊಲೀಸರು ಸೂಚಿಸಿದ್ದಾರೆ.

ಪೋಸ್ಟ್ನಲ್ಲಿ ಏನಿದೆ?: ಎಲ್ಲಾ ಕಾಕ್ರೋಚ್ಗಳೇ ಮತ್ತು ಕಾಕ್ರೋಚ್ ಜನತಾ ಪಕ್ಷದ ಅಭಿಮಾನಿಗಳೇ... ಬನ್ನಿ ಅಂದು ಶಕ್ತಿ ಪ್ರದರ್ಶಿಸೋಣ. ಆತ್ಮವಂಚಕ ಆಡಳಿತಕ್ಕೆ ಸಂದೇಶ ರವಾನಿಸೋಣ. ಯುವಕರಿಗೆ ಭವಿಷ್ಯವಿಲ್ಲ. ಬೆಲೆ ಏರಿಕೆಯಿಂದ ಬದುಕಿಲ್ಲ. ನಮ್ಮ ಮತ ಕದಿಯುತ್ತಿದ್ದಾರೆ. ಬನ್ನಿ ಕಾಕ್ರೋಚ್ಗಳ ಸಂದೇಶ ನೀಡೋಣ. ಇಲ್ಲಿ ನಾಯಕರಿಲ್ಲ; ನಮಗೆ ನಾವೇ ನಾಯಕರು. ಇಲ್ಲಿ ಸಂಘಟನೆ ಇಲ್ಲ; ಪ್ರಜೆಗಳು ಕೈಜೋಡಿಸುವುದೇ ಸಂಘಟನೆ ಎಂದು ಪೋಸ್ಟ್ನಲ್ಲಿ ಬರೆಯಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.