ಸೋಮವಾರ, ನವೆಂಬರ್ 18, 2019
25 °C

ಉಪಚುನಾವಣೆ: 11ರಿಂದ ನೀತಿಸಂಹಿತೆ ಜಾರಿ

Published:
Updated:

ಬೆಂಗಳೂರು: ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಲಿರುವುದರಿಂದ, ವಿಧಾನಸಭಾ ಕ್ಷೇತ್ರಗಳಿರುವ ಜಿಲ್ಲೆಗಳಲ್ಲಿ ಇದೇ 11ರಿಂದ ನೀತಿಸಂಹಿತೆ ಜಾರಿಗೆ ಬರಲಿದೆ ಎಂದು ಮುಖ್ಯ ಚುನಾವಣಾ ಅಧಿಕಾರಿಯವರ ಕಚೇರಿ ಪ್ರಕಟಣೆ ತಿಳಿಸಿದೆ.

ಈ ಸೂಚನೆಯ ಹಿನ್ನೆಲೆಯಲ್ಲಿ ಬೆಂಗಳೂರು ನಗರ ವ್ಯಾಪ್ತಿ ಮಾತ್ರವಲ್ಲದೆ, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಬಳ್ಳಾರಿ, ಚಿಕ್ಕಬಳ್ಳಾಪುರ, ಹಾವೇರಿ, ಮಂಡ್ಯ, ಮೈಸೂರು ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಚುನಾವಣಾ ಪ್ರಕ್ರಿಯೆ ಕೊನೆಗೊಳ್ಳುವ ತನಕ ನೀತಿ ಸಂಹಿತೆ ಜಾರಿಯಲ್ಲಿರಲಿದೆ.

 

ಪ್ರತಿಕ್ರಿಯಿಸಿ (+)