ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಗ್ನಿಜೆಂಟ್‌ನಿಂದ ಕಂಫ್ಯೂಟರ್ ಕೊಡುಗೆ: ವಾಹನಕ್ಕೆ ಹಸಿರು ನಿಶಾನೆ

ಸರ್ಕಾರಿ ಪದವಿ, ಎಂಜಿನಿಯರಿಂಗ್, ತಾಂತ್ರಿಕ ಕಾಲೇಜು ವಿದ್ಯಾರ್ಥಿಗಳಿಗೆ ಬೇಕು 30 ಸಾವಿರ ಕಂಪ್ಯೂಟರ್ʼ
Last Updated 8 ಏಪ್ರಿಲ್ 2021, 8:07 IST
ಅಕ್ಷರ ಗಾತ್ರ

ಬೆಂಗಳೂರು: ಉನ್ನತ ಶಿಕ್ಷಣ ಇಲಾಖೆಯ "ಹೆಲ್ಪ್‌ ಎಜುಕೇಟ್" ಉಪಕ್ರಮದ ಅಡಿಯಲ್ಲಿ ವಿವಿಧ ಕಾಲೇಜುಗಳಿಗೆ ಡಿಬಾಂಡೆಡ್‌ ಕಂಪ್ಯೂಟರ್‌ಗಳನ್ನು ಇಲಾಖೆಯ ಉನ್ನತ ಅಧಿಕಾರಿಗಳು ಗುರುವಾರ ಕಳುಹಿಸಿಕೊಟ್ಟರು.

ಶೇಷಾದ್ರಿ ರಸ್ತೆಯಲ್ಲಿರುವ ಕಾಲೇಜು ಶಿಕ್ಷಣ ಇಲಾಖೆಯ ಕಚೇರಿ ಮುಂಭಾಗದಿಂದ ಕಂಪ್ಯೂಟರ್‌ಗಳನ್ನು ಹೊತ್ತು ಹೊರಟ ವಾಹನಗಳಿಗೆ ಇಲಾಖೆಯ ಆಯುಕ್ತ ಪ್ರದೀಪ್ ಹಸಿರು ನಿಶಾನೆ ತೋರಿಸಿದರು.

ಕಾಗ್ನಿಜೆಂಟ್‌ ಸಂಸ್ಥೆ ನೀಡಿರುವ ಡಿಬಾಂಡೆಡ್‌ ಕಂಪ್ಯೂಟರ್‌ಗಳನ್ನು ವಿವಿಧ ಕಾಲೇಜುಗಳಿಗೆ ರವಾನಿಸಲಾಯಿತಲ್ಲದೆ, ವಿವಿಧ ಹಂತಗಳಲ್ಲಿ ಒಟ್ಟು 12,500 ಡಿಬಾಂಡೆಡ್‌ ಕಂಪ್ಯೂಟರ್‌ಗಳನ್ನು ಕಳಿಸಲಾಗುತ್ತಿದೆ. ಗುರುವಾರ ರವಾನಿಸಿದ ಕಂಪ್ಯೂಟರ್‌ಗಳನ್ನು ಬೆಂಗಳೂರು ವಲಯದ ಕಾಲೇಜುಗಳಿಗೆ ವಿತರಣೆ ಮಾಡಲಾಗುವುದು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರದೀಪ್‌, "ಕಾಗ್ನಿಜೆಂಟ್‌ ಸಂಸ್ಥೆ ಡಿಬಾಂಡೆಡ್‌ 12,500 ಕಂಪ್ಯೂಟರ್ʼಗಳನ್ನು ಕಾಲೇಜು ಶಿಕ್ಷಣ ಇಲಾಖೆಗೆ ನೀಡಿದೆ. ಇದಕ್ಕೆ ಅಗತ್ಯವಾದ ಸಾಫ್ಟ್ʼವೇರ್ ಅನ್ನು ರೋಟರಿ ಕ್ಲಬ್ ಅಪ್ ಡೇಟ್ ಮಾಡಿಕೊಡುತ್ತಿದೆ. ಈ ಕಂಪ್ಯೂಟರ್ʼಗಳನ್ನು ಸರ್ಕಾರಿ ಪದವಿ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ತಾಂತ್ರಿಕ ಶಿಕ್ಷಣ ಇಲಾಖೆ ಕಾಲೇಜುಗಳ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ" ಎಂದರು‌.

'ಎಲ್ಲ ಸರ್ಕಾರಿ ಪದವಿ, ಎಂಜಿನಿಯರಿಂಗ್, ತಾಂತ್ರಿಕ ಕಾಲೇಜುಗಳಿಗೆ ಒಟ್ಟು 30,000 ಕಂಪ್ಯೂಟರ್ʼಗಳು ಬೇಕು. ಈಗ ಕಾಗ್ನಿಜೆಂಟ್ ಕಂಪನಿ 12,500 ಕಂಪ್ಯೂಟರ್ʼಗಳನ್ನು ನೀಡುತ್ತಿದೆ. ಮತ್ತೆ 8000 ಕಂಪ್ಯೂಟರ್ʼಗಳನ್ನ ಕೊಡುವುದಾಗಿ ತಿಳಿಸಿದೆ. ಉಳಿದ 10,000 ಕಂಪ್ಯೂಟರ್‌ʼಗಳನ್ನು ಬೇರೆ ಬೇರೆ ಕಂಪನಿಗಳಿಂದ ಪಡೆಯುವ ಕೆಲಸ ಮಾಡಲಾಗುವುದು' ಎಂದರು ಪ್ರದೀಪ್.

ವಿದ್ಯಾರ್ಥಿಗಳಿಗೆ ನೆರವಾಗುವ ಹಾಗೂ ಅಧ್ಯಾಪಕರಿಗೆ ತರಬೇತಿ ನೀಡುವುದು, ಕಾಲೇಜುಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲು ಹೆಲ್ಪ್‌ ಎಜುಕೇಟ್‌ ಹೆಸರಿನಲ್ಲಿ ಈ ಕಾರ್ಯಕ್ರಮವನ್ನು ಜಾರಿಗೆ ತಂದಿದ್ದೇವೆ ಎಂದು ಅವರು ಮಾಹಿತಿ ನೀಡಿದರು.

ರೋಟರಿ ಕ್ಲಬ್ ಮುಖ್ಯಸ್ಥ ನಾಗೇಂದ್ರ ಪ್ರಸಾದ್, ಕಾಗ್ನಿಜೆಂಟ್ ಸಂಸ್ಥೆಯ ಸೆಲ್ವಿ ಮತ್ತಿತರರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT