ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಂಪೇಗೌಡರ ಸೊಸೆಯ ಸಮಾಧಿ ಸ್ಥಳದಲ್ಲಿ ಪವಿತ್ರ ಮೃತ್ತಿಕೆ ಸಂಗ್ರಹ

Last Updated 31 ಅಕ್ಟೋಬರ್ 2022, 21:39 IST
ಅಕ್ಷರ ಗಾತ್ರ

ಬೆಂಗಳೂರು: ಕೆಂಪೇಗೌಡರ ಪ್ರತಿಮೆ ಉದ್ಘಾಟನೆಗೆ ಪೂರಕವಾಗಿ ನಡೆಯುತ್ತಿರುವ ಪವಿತ್ರ ಮೃತ್ತಿಕಾ ಸಂಗ್ರಹ ಅಭಿಯಾನವು ಮಂಗಳವಾರ ಕೋರಮಂಗಲದ 8ನೇ ಬ್ಲಾಕ್‌ ಕೆಂಪೇಗೌಡರ ಸೊಸೆ ಲಕ್ಷ್ಮಿದೇವಿ ಸಮಾಧಿಯ ಬಳಿ ನಡೆಯಿತು.

ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ, ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ, ಬಿಜೆಪಿ ಮುಖಂಡರಾದ ಎನ್.ಆರ್.ರಮೇಶ್, ಶ್ರೀಧರರೆಡ್ಡಿ, ರವಿ, ಲೋಕನಾಥ ರೆಡ್ಡಿ, ಗೀತಾ ವಿವೇಕಾನಂದ ಮುಂತಾದವರು ಲಕ್ಷ್ಮಿದೇವಿ ಸಮಾಧಿಗೆ ಪೂಜೆ ಸಲ್ಲಿಸಿ, ಮೃತ್ತಿಕೆ ಸಂಗ್ರಹಿಸಿದರು. ಬಿಜೆಪಿ ಸಂಘಟನಾ ಕಾರ್ಯದರ್ಶಿ ದಶರಥ ಇದ್ದರು. ಜತೆಗೆ, ಡೊಳ್ಳು ಕುಣಿತ ಮುಂತಾದ ಜಾನಪದ ನೃತ್ಯಗಳ ಮೆರುಗು ಆಕರ್ಷಕವಾಗಿತ್ತು.

ಮೆರವಣಿಗೆಯ ಹಾದಿಯಲ್ಲಿ ಬಿಟಿಎಂ ಬಡಾವಣೆಯಲ್ಲಿ ಇರುವ ಕೆಂಪೇಗೌಡ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. ಮಡಿವಾಳದ ಸೋಮೇಶ್ವರ ದೇವಸ್ಥಾನ, ಕೋರಮಂಗಲದ ಸಿದ್ಧಾರ್ಥ ಕಾಲೊನಿಯಲ್ಲಿ ಇರುವ ಗಣೇಶನ ದೇವಾಲಯ, ಈಜಿಪುರದ ಶ್ರೀರಾಮ ದೇವಸ್ಥಾನ, ದೊಡ್ಡಮ್ಮದೇವಿ ಮಂದಿರಗಳಿಗೆ ತೆರಳಿ, ಪೂಜೆ ನೆರವೇರಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT