ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಟ್ಟುನಿಟ್ಟಾಗಿ ಮಾರ್ಗಸೂಚಿ ಪಾಲಿಸಿ: ಕಾಲೇಜುಗಳಿಗೆ ಸೂಚನೆ

Last Updated 18 ಜುಲೈ 2021, 20:03 IST
ಅಕ್ಷರ ಗಾತ್ರ

ಬೆಂಗಳೂರು: ಕಾಲೇಜುಗಳ ಪುನರಾರಂಭಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳು ಜುಲೈ 26ರಿಂದ ಕಾರ್ಯಾರಂಭ ಮಾಡಲಿವೆ. ಆದರೆ, ಕೋವಿಡ್‌ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲೇಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಸೂಚನೆ ನೀಡಿದ್ದಾರೆ.

‘ಶೇ 70ರಿಂದ ಶೇ 80ರಷ್ಟು ಕಾಲೇಜು ವಿದ್ಯಾರ್ಥಿಗಳು ಲಸಿಕೆ ಪಡೆದಿದ್ದಾರೆ. ಕಾಲೇಜು ಪುನರಾರಂಭಿಸುವ ಸಮಯ ಈಗ ಬಂದಿದೆ. ಆದರೆ, ಸೂಕ್ತ ಅಂತರ ಕಾಪಾಡಿಕೊಂಡು ಮಾರ್ಗಸೂಚಿಗಳನ್ನು ಪಾಲಿಸುವುದು ಅತಿ ಅಗತ್ಯ’ ಎಂದು ಅವರು ಹೇಳಿದರು.

ಜುಲೈ 8ರ ವೇಳೆಗೆ, ಸರ್ಕಾರಿ ಕಾಲೇಜು ಹಾಗೂ ಅನುದಾನಿತ ಪದವಿ ಕಾಲೇಜುಗಳ 62,255 (ಶೇ 51.12) ವಿದ್ಯಾರ್ಥಿಗಳು ಮತ್ತು ಬೋಧಕ–ಬೋಧಕೇತರ ಸಿಬ್ಬಂದಿ ಲಸಿಕೆ ಪಡೆದಿದ್ದರು ಎಂದು ಬಿಬಿಎಂಪಿ ವಲಯವಾರು ಅಂಕಿ–ಅಂಶ ಹೇಳಿತ್ತು. ಉಪಮುಖ್ಯಮಂತ್ರಿ, ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರೂ ಇದನ್ನು ಉಲ್ಲೇಖಿಸಿದ್ದರು.

ಚಿತ್ರಮಂದಿರಗಳಲ್ಲಿ ನಿಗಾ:

ಚಿತ್ರಮಂದಿರಗಳು ಶೇ 50ರಷ್ಟು ಆಸನ ಸಾಮರ್ಥ್ಯದೊಂದಿಗೆ ಸೋಮವಾರದಿಂದ ಪುನರಾರಂಭವಾಗಲಿವೆ. ಇಲ್ಲಿ ಮಾರ್ಷಲ್‌ಗಳು, ಗೃಹರಕ್ಷಕರು ಹಾಗೂ ಬಿಬಿಎಂಪಿ ಅಧಿಕಾರಿಗಳ ಮೂಲಕ, ಕೋವಿಡ್‌ ಮಾರ್ಗಸೂಚಿ ಪಾಲನೆ ಬಗ್ಗೆ ನಿಗಾ ಇಡಲಾಗುವುದು ಎಂದು ಗೌರವ್ ಗುಪ್ತ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT