ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಳೆಯಿಂದ ಕಾಲೇಜು ಪುನರಾರಂಭ: ಸಕಲ ಸಿದ್ಧತೆ

Last Updated 15 ನವೆಂಬರ್ 2020, 21:28 IST
ಅಕ್ಷರ ಗಾತ್ರ

ಬೆಂಗಳೂರು: ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ ಮತ್ತು ಎಂಜಿನಿಯರಿಂಗ್ ಕಾಲೇಜುಗಳನ್ನು ನ.17ರಿಂದ ಪುನರಾರಂಭಿಸಲು ರಾಜ್ಯಸರ್ಕಾರ ನಿರ್ಧರಿಸಿದ್ದು, ಈ ನಿಟ್ಟಿನಲ್ಲಿ ಸಕಲ ಸಿದ್ಧತೆ ಭರದಿಂದ ಸಾಗಿದೆ.

ಭೌತಿಕ ಮತ್ತು ಆನ್‌ಲೈನ್‌ ಎರಡೂ ಮಾದರಿಯ ತರಗತಿಗಳನ್ನು ಪ್ರಾರಂಭಿಸಲು ಬೆಂಗಳೂರು ವಿಶ್ವವಿದ್ಯಾಲಯದ ಎಲ್ಲ ಸಿದ್ಧತೆ ಮಾಡಿಕೊಂಡಿದೆ. ವಿಶ್ವವಿದ್ಯಾಲಯ ವ್ಯಾಪ್ತಿಯ ಎಲ್ಲ ಕಾಲೇಜುಗಳ ಪ್ರಾಚಾರ್ಯರ ಸಭೆ ನಡೆಸಿದ ಕುಲಪತಿ ಪ್ರೊ. ಕೆ.ಆರ್. ವೇಣುಗೋಪಾಲ್, ಕೋವಿಡ್‌ ಕಾರಣ ಕೈಗೊಂಡಿರುವ ಸುರಕ್ಷತಾ ಕ್ರಮಗಳ ಮಾಹಿತಿ ಪಡೆದರು.

ವಿಶ್ವವಿದ್ಯಾಲಯ ಅನುದಾನ ಆಯೋಗವು (ಯುಜಿಸಿ) ಹೊರಡಿಸಿರುವ ಮಾರ್ಗಸೂಚಿಗಳ ಅನ್ವಯ ನೇರ ತರಗತಿಗಳನ್ನು ನಡೆಸುವುದಕ್ಕೆ ಬೇಕಾದ ಸಿದ್ಧತೆ, ತರಗತಿಯ ವಾತಾವರಣ ಹೇಗಿರಬೇಕು ಎಂಬುದರ ಬಗ್ಗೆ ಸೂಚನೆಗಳನ್ನು ನೀಡಿದರು. ಈ ಉದ್ದೇಶದಿಂದ ಐದು ಕಾರ್ಯಪಡೆಗಳನ್ನು ರಚಿಸಲಾಗಿದ್ದು, ಶೈಕ್ಷಣಿಕ ಚಟುವಟಿಕೆಗಳ ಮೇಲ್ವಿಚಾರಣೆಯನ್ನು ಈ ಕಾರ್ಯಪಡೆ ನೋಡಿಕೊಳ್ಳಲಿದೆ.

ಒಟ್ಟು ವಿದ್ಯಾರ್ಥಿಗಳು ಹಾಗೂ ಲಭ್ಯವಿರುವ ಕೊಠಡಿಗಳ ಸಂಖ್ಯೆಯ ಆಧಾರದ ಮೇಲೆ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳು ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಭೌತಿಕ ತರಗತಿ ನಡೆಸಲು ಆರೋಗ್ಯ ಇಲಾಖೆ ನಿರ್ದೇಶನ ನೀಡಿದೆ. ಅಲ್ಲದೆ, ನೇರ ತರಗತಿಗೆ ಹಾಜರಾಗುವ ಬಗ್ಗೆ ನಿಗದಿತ ನಮೂನೆಯಲ್ಲಿ ಒಪ್ಪಿಗೆ ಪತ್ರ ಪಡೆದುಕೊಳ್ಳುವ ಬಗ್ಗೆಯೂ ಇಲಾಖೆ ನಿರ್ದೇಶಿಸಿದೆ.

ಅಂತಿಮ ವರ್ಷ ಬಿಟ್ಟು ಉಳಿದ ಸೆಮಿಸ್ಟರ್‌ ವಿದ್ಯಾರ್ಥಿಗಳಿಗೆ ಆನ್‌ಲೈನ್‌ ತರಗತಿ ನಡೆಸಲು ಬೇಕಾದ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಯಿತು.

ಕಾಲೇಜು ಕಟ್ಟಡ, ಶೌಚಾಲಯ, ತರಗತಿ, ಗ್ರಂಥಾಲಯ ಹಾಗೂ ಪ್ರಯೋಗಾಲಯಗಳಲ್ಲಿ ಸೋಂಕುಮುಕ್ತ ದ್ರಾವಣ ಸಿಂಪಡಿಸಬೇಕು ಎಂದು ಈಗಾಗಲೇ ನಿರ್ದೇಶನ ನೀಡಲಾಗಿದೆ. ಕಾಲೇಜು ಪ್ರಾರಂಭವಾಗುವುದಕ್ಕೆ ಮೂರು ದಿನಗಳ ಮೊದಲು ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಕೋವಿಡ್‌ ಪರೀಕ್ಷೆಗೆ ಒಳಗಾಗಬೇಕು ಮತ್ತು ಈ ನಿಟ್ಟಿನಲ್ಲಿ ಎಲ್ಲರಲ್ಲಿಯೂ ಜಾಗೃತಿ ಮೂಡಿಸಬೇಕು ಎಂದು ಕುಲಪತಿ ಸೂಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT