ಸೋಮವಾರ, ಜೂನ್ 27, 2022
26 °C

ಕೊಳವೆ ಮಾರ್ಗ ನಿರ್ಮಾಣ ಕಾಮಗಾರಿಗೆ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಲಹಂಕ:ಗ್ರಾಮಗಳಿಂದ ಹರಿದು ಬರುವ ತ್ಯಾಜ್ಯ ನೀರು ಕೆರೆಗೆ ಸೇರಬಾರದೆಂಬ ಉದ್ದೇಶದಿಂದ ಗ್ರಾಮಪಂಚಾಯಿತಿ ಅನುದಾನದಲ್ಲಿ ₹1 ಕೋಟಿ ವೆಚ್ಚದಲ್ಲಿ ಕೋಡಗಲಹಟ್ಟಿ ಕೆರೆ ಪಕ್ಕದಲ್ಲಿ ಕೊಳಚೆ ನೀರು ಸಂಸ್ಕರಣಾ ಘಟಕ ನಿರ್ಮಿಸಲಾಗುವುದು ಎಂದು ಶಾಸಕ ಕೃಷ್ಣ ಬೈರೇಗೌಡ ಹೇಳಿದರು.

ಹುಣಸಮಾರನಹಳ್ಳಿಯ ಭಾರತಿನಗರದಲ್ಲಿ ₹15 ಲಕ್ಷ ವೆಚ್ಚದಲ್ಲಿ ಪ್ರತ್ಯೇಕ ಕೊಳವೆಮಾರ್ಗ ಅಳವಡಿಸುವ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಇಲ್ಲಿಯವರೆಗೆ ಈ ಗ್ರಾಮಗಳ ಕೊಳಚೆ ನೀರು ಹರಿದು ಹೋಗಲು ಪ್ರತ್ಯೇಕ ಕಾಲುವೆಯಿಲ್ಲದೆ ತ್ಯಾಜ್ಯ ಕಟ್ಟಿಕೊಂಡು ದುರ್ವಾಸನೆ ಬೀರುತ್ತಿತ್ತು. ಇದರಿಂದ ಜನರು ತೊಂದರೆ ಅನುಭವಿಸುತ್ತಿದ್ದರು. ಮುಂದಿನ ದಿನಗಳಲ್ಲಿ ಈ ಸಮಸ್ಯೆ ನಿವಾರಣೆಯಾಗಲಿದೆ ಎಂದರು.

ಭಾರತೀಯ ವಾಯುನೆಲೆಯ ಡೆಪ್ಯುಟಿ ಕೇಡರ್ ಮೋಹನ್ ಕುಮಾರ್, ಜಿಲ್ಲಾ ಪಂಚಾಯಿತಿ ಸದಸ್ಯೆ ಸಜಿತಾ ಅಶೋಕನ್, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷೆ ಸುಜಾತ ಶ್ರೀನಿವಾಸ್, ಕಾಂಗ್ರೆಸ್ ಮುಖಂಡರಾದ ಕೆ.ಅಶೋಕನ್, ಎಂ.ಜಯಗೋಪಾಲಗೌಡ, ದಾನೇಗೌಡ, ಎಚ್.ಪಿ.ನಾರಾಯಣಸ್ವಾಮಿ, ಶರಣ್ ಕುಮಾರ್, ದಯಾನಂದ್, ಹರೀಶ್ ಕುಮಾರ್ ಉಪಸ್ಥಿತರಿದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು