ಬೆಂಗಳೂರು: ಇತ್ತೀಚೆಗೆ ಲಂಡನ್ ಪ್ರವಾಸ ಕೈಗೊಂಡ ಕರ್ನಾಟಕ ರಾಜ್ಯ ಸರ್ಕಾರದ ಉನ್ನತ ಶಿಕ್ಷಣ ಸಚಿವರು ರಾಜ್ಯದಲ್ಲಿ ವಿದೇಶಿ ವಿಶ್ವವಿದ್ಯಾಲಯಗಳಿಗೆ ಅವಕಾಶ ಕಲ್ಪಿಸುವುದಾಗಿ ಮತ್ತು ಇದರಿಂದ ರಾಜ್ಯದ ಶೈಕ್ಷಣಿಕ ಗುಣಮಟ್ಟ ವೃದ್ಧಿಸುವುದು ಎಂದು ಹೇಳಿದ್ದಾರೆ. ಇದು ಉನ್ನತ ಶಿಕ್ಷಣದ ವ್ಯಾಪಾರೀಕರಣ ಎಂದು ಎಐಡಿಎಸ್ಒ ಕರ್ನಾಟಕ ರಾಜ್ಯ ಸಮಿತಿ ತಿಳಿಸಿದೆ.

ರಾಜ್ಯ ಸರ್ಕಾರಿ ವಿಶ್ವವಿದ್ಯಾಲಯಗಳು ಅಧ್ಯಾಪಕರು ಹಾಗೂ ಮೂಲಭೂತ ಸೌಕರ್ಯಗಳ ಕೊರತೆಯನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ಸರ್ಕಾರದ ಈ ನಡೆಯು ಹಾಸ್ಯಾಸ್ಪದವಾಗಿದೆ. ಪ್ರಸ್ತುತ ಸರ್ಕಾರಿ ಶುಲ್ಕಗಳನ್ನು ಭರಿಸಲು ಸಾಧ್ಯವಾಗದೇ ಗಣನೀಯ ಪ್ರಮಾಣದ ಬಡ ವಿದ್ಯಾರ್ಥಿಗಳು ಉನ್ನತ ಶೈಕ್ಷಣಿಕದಿಂದ ದೂರ ಉಳಿಯುತ್ತಿದ್ದಾರೆ. ರಾಜ್ಯ ಶಿಕ್ಷಣ ನೀತಿಯನ್ನು ರೂಪಿಸಲು ಕರ್ನಾಟಕ ಸರ್ಕಾರವು ನೇಮಿಸಿದ್ದ ಎಸ್ಇಪಿ ಆಯೋಗವು ಕೂಡ ವಿದೇಶಿ ವಿಶ್ವವಿದ್ಯಾಲಯಗಳಿಗೆ ಅವಕಾಶ ನೀಡಬಾರದು ಎಂದು ತನ್ನ ವರದಿಯಲ್ಲಿ ತಿಳಿಸಿದೆ. ಆದರೂ ಸರ್ಕಾರವು ತನ್ನ ಅಜೆಂಡಾ ಮುಂದುವರಿಸುತ್ತಿದೆ ಎಂದು ಎಐಡಿಎಸ್ಒ ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್ ಆರೋಪಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.