ಬುಧವಾರ, ಸೆಪ್ಟೆಂಬರ್ 22, 2021
21 °C

ವರಿಷ್ಠರು ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ: ಶಾಸಕ ಎಂ.ಪಿ. ರೇಣುಕಾಚಾರ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಬಿಜೆಪಿ ನನಗೆ ತಾಯಿ ಸಮಾನ. ನನ್ನ ಪಕ್ಷ, ಸಂಘಟನೆ ಹಾಗೂ ವರಿಷ್ಠರು ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧನಾಗಿದ್ದೇನೆ’ ಎಂದು ಸಚಿವ ಸ್ಥಾನ ನಿರೀಕ್ಷೆಯಲ್ಲಿದ್ದ ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ಟ್ವೀಟ್ ಮಾಡಿದ್ದಾರೆ.

ಸಚಿವ ಸ್ಥಾನ ಸಿಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದ ರೇಣುಕಾಚಾರ್ಯ ಅವರಿಗೆ ಅವಕಾಶ ಕೈ ತಪ್ಪಿದೆ. ಇದರಿಂದ‌ ಅವರ ಅಭಿಮಾನಿಗಳಿಗೆ‌ ನಿರಾಸೆಯಾಗಿದೆ. ಸಚಿವ ಸ್ಥಾನ ಕೈತಪ್ಪಿದ ಕಾರಣಕ್ಕೆ ಅಭಿಮಾನಿಗಳು ನಿರಾಸೆಗೆ ಒಳಗಾಗದಂತೆ ಟ್ವಿಟರ್​​ನಲ್ಲಿ ರೇಣುಕಾಚಾರ್ಯ ಮನವಿ ಮಾಡಿದ್ದಾರೆ.

‘ಜನ ಸೇವೆಯೇ ನನ್ನ ಕಾಯಕ, ನನ್ನ ಜೀವನವನ್ನು ನನ್ನ ಮತ ಕ್ಷೇತ್ರವಾದ ಹೊನ್ನಾಳಿ-ನ್ಯಾಮತಿ ಅವಳಿ ತಾಲ್ಲೂಕಿನ ಜನತೆಯ ಸೇವೆಗೆ ಮುಡಿಪಾಗಿಡುತ್ತೇನೆ. ನಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ನಿರಾಶರಾಗಬಾರದು’ ಎಂದಿರುವ ಅವರು ಮುಂಬರುವ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗೆ ಪಕ್ಷವನ್ನು ಸಂಘಟಿಸುವಂತೆ ಅಭಿಮಾನಿಗಳಿಗೆ ಹಾಗೂ ಕಾರ್ಯರ್ತರಲ್ಲಿ ಅವರು ಮನವಿ ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು