ಬೆಂಗಳೂರು: ಚಿಕ್ಕಪೇಟೆ ವ್ಯಾಪ್ತಿಯ ವಾಣಿಜ್ಯ ಪ್ರದೇಶಗಳಲ್ಲಿ ಅವಘಡಗಳು ಸಂಭವಿಸದಂತೆ ಹಾಗೂ ಅವುಗಳನ್ನು ನಿಯಂತ್ರಿಸಲು ಸಮಗ್ರ ವರದಿ ಸಿದ್ಧಪಡಿಸಲು ಸಮಿತಿ ರಚಿಸುವಂತೆ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಚಿಕ್ಕಪೇಟೆ ವ್ಯಾಪ್ತಿಯ ಕುಂಬಾರಪೇಟೆಯಲ್ಲಿ ಬುಧವಾರ ಬೆಂಕಿ ಅವಘಡ ಸಂಭವಿಸಿದ ಸ್ಥಳಕ್ಕೆ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಅವರು ಮಾತನಾಡಿದರು.

ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಚಿಕ್ಕಪೇಟೆ ವ್ಯಾಪ್ತಿಯ ನಗರ್ತರಪೇಟೆಯಲ್ಲಿ ಕಳೆದ ವರ್ಷವೂ ಬೆಂಕಿ ಅವಘಡ ಸಂಭವಿಸಿತ್ತು. ಇದೀಗ ಕುಂಬಾರಪೇಟೆಯಲ್ಲಿ ಬೆಂಕಿ ಅವಘಡ ಸಂಭವಿಸಿರುವುದು, ಅವಘಡಕ್ಕೆ ಕಾರಣಗಳೇನು ಹಾಗೂ ಇಂತಹ ಘಟನೆಗಳನ್ನು ಯಾವ ರೀತಿಯಲ್ಲಿ ಪರಿಣಾಮಕಾರಿಯಾಗಿ ನಿಯಂತ್ರಿಸಬಹುದು ಎಂಬುದರ ಕುರಿತು ಸಮಗ್ರ ಪರಿಶೀಲನೆ ನಡೆಸಿ ವರದಿ ಸಲ್ಲಿಸಲು ಜಿಬಿಎ, ಕೇಂದ್ರ ನಗರ ಪಾಲಿಕೆ, ಅಗ್ನಿಶಾಮಕ ಹಾಗೂ ವಿದ್ಯುತ್ ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡ ಸಮಿತಿ ರಚಿಸಲು ಸೂಚನೆ ನೀಡಿದರು.

ಬೆಂಕಿ ಅವಘಡಗಳನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಪ್ರಮುಖ ಸ್ಥಳಗಳಲ್ಲಿ ‘ಹೈಡ್ರೆಂಟ್’ ವ್ಯವಸ್ಥೆ ಕಲ್ಪಿಸಲು ಕ್ರಮವಹಿಸಬೇಕು. ಇದರ ಜೊತೆಗೆ, ಮೇಲ್ವಿಚಾರಣೆಗೆ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿ ಎಂದು ಆದೇಶಿಸಿದರು.

ಕುಂಬಾರಪೇಟೆಯ ‘ಲಕ್ಷ್ಮಿ ಕಮರ್ಶಿಯಲ್ ಕಾಂಪ್ಲೆಕ್ಸ್’ನ ಮೂರನೇ ಅಂತಸ್ತಿನಲ್ಲಿ ಬುಧವಾರ ಬೆಳಿಗ್ಗೆ ಬೆಂಕಿ ಅವಘಡ ಸಂಭವಿಸಿದೆ. ಕಿರಿದಾದ ರಸ್ತೆ ಇರುವುದರಿಂದ ಅಗ್ನಿಶಾಮಕ ವಾಹನಗಳಿಗೆ ನೇರವಾಗಿ ಪ್ರವೇಶ ಸಾಧ್ಯವಾಗಲಿಲ್ಲ. ಸುಮಾರು 300 ಮೀಟರ್ ದೂರದಿಂದ ಪೈಪ್ ವ್ಯವಸ್ಥೆ ಮಾಡಿಕೊಂಡು ಬೆಂಕಿ ನಂದಿಸಲಾಯಿತು ಎಂದು ಅಗ್ನಿಶಾಮಕ ದಳದ ಸಿಬ್ಬಂದಿ ಮಾಹಿತಿ ನೀಡಿದರು.

ಕೇಂದ್ರ ನಗರ ಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್, ಅಭಿವೃದ್ಧಿ ವಿಭಾಗದ ಹೆಚ್ಚುವರಿ ಆಯುಕ್ತ ದಲ್ಜಿತ್ ಕುಮಾರ್, ಜಂಟಿ ಆಯುಕ್ತ ಹೇಮಂತ್ ಶರಣ್, ಮುಖ್ಯ ಎಂಜಿನಿಯರ್ ವಿಜಯ್ ಕುಮಾರ್ ಹರಿದಾಸ್ ಉಪಸ್ಥಿತರಿದ್ದರು.

ಶೌಚಾಲಯ ಸ್ವಚ್ಛವಾಗಿರಲಿ: ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಎಲ್ಲಾ ಸಾರ್ವಜನಿಕ ಶೌಚಾಲಯಗಳನ್ನು ಶೇಕಡ 100ರಷ್ಟು ಸ್ವಚ್ಛವಾಗಿಡಬೇಕು ಎಂದು ಮಹೇಶ್ವರ್ ಸೂಚಿಸಿದರು.

ದಾಸಪ್ಪ ಆಸ್ಪತ್ರೆಯಲ್ಲಿ ಲಭ್ಯವಿರುವ ಸೌಲಭ್ಯಗಳು, ಕಾರ್ಯನಿರ್ವಹಿಸುವ ವೈದ್ಯರು ಹಾಗೂ ಸಿಬ್ಬಂದಿ ವಿವರಗಳನ್ನು ಒಳಗೊಂಡ ಮಾಹಿತಿ ಫಲಕವನ್ನು ಅಳವಡಿಸಬೇಕು. ಆಸ್ಪತ್ರೆ ಆವರಣದಲ್ಲಿ ಎಲೆಗಳನ್ನು ಗೊಬ್ಬರವಾಗಿ ಪರಿವರ್ತಿಸಬೇಕು. ಹಸಿರು ಕಟ್ಟಡ ನಿರ್ಮಾಣ ಹಾಗೂ ಬಹು ಅಂತಸ್ತಿನ ಕಾರು ಪಾರ್ಕಿಂಗ್ ನಿರ್ಮಾಣಕ್ಕೆ ಅವಕಾಶವಿದೆಯೇ ಎಂಬುದರ ಬಗ್ಗೆ ಕಾರ್ಯಸಾಧ್ಯತಾ ವರದಿ ಸಿದ್ಧಪಡಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಎಚ್. ಸಿದ್ದಯ್ಯ ರಸ್ತೆ ರೆಫರಲ್ ಆಸ್ಪತ್ರೆಗೆ ಭೇಟಿ ನೀಡಿ, ಲಿಫ್ಟ್ ದುರಸ್ತಿ ಮಾಡಿ ಕಾರ್ಯನಿರ್ವಹಣೆಗೆ ತರಬೇಕು. ಆಸ್ಪತ್ರೆಗೆ ನೀರಿನ ಸಂಪರ್ಕ ಸಮರ್ಪಕವಾಗಿರುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.

ಬೀಗಮುದ್ರೆ ಹಾಕಿ: ಮಹೇಶ್ವರ್ ರಾವ್ ಸೂಚನೆ

* ಚಿಕ್ಕಪೇಟೆ ವ್ಯಾಪ್ತಿಯ ಎಲ್ಲಾ ವಾಣಿಜ್ಯ ಕಟ್ಟಡಗಳಲ್ಲಿಯೂ ಅಗ್ನಿ ಸುರಕ್ಷತಾ ವ್ಯವಸ್ಥೆ ಕಡ್ಡಾಯವಾಗಿರಬೇಕು. ಈ ವ್ಯವಸ್ಥೆ ಇಲ್ಲದ ಕಟ್ಟಡಗಳಿಗೆ ಬೀಗಮುದ್ರೆ ಹಾಕಬೇಕು

* ವ್ಯಾಪಾರ ಸಂಘಟನೆಗಳ ಜೊತೆ ಸಭೆ ನಡೆಸಿ ಅಗತ್ಯ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸಿ ಅವುಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಬೇಕು

* ಅನಧಿಕೃತ ಕಟ್ಟಡಗಳಿಗೆ ತಕ್ಷಣವೇ ವಿದ್ಯುತ್ ಸಂಪರ್ಕ ಕಡಿತಗೊಳಿಸಿ ನಿರ್ಮಾಣ ಕಾಮಗಾರಿಗಳನ್ನು ನಿಲ್ಲಿಸಲು ನೋಟಿಸ್ ಜಾರಿ ಮಾಡಬೇಕು.

* ನಕ್ಷೆ ಉಲ್ಲಂಘಿಸಿ ನಿರ್ಮಿಸಿರುವ ಭಾಗಗಳನ್ನು ತೆರವುಗೊಳಿಸದಿದ್ದರೆ ಕಟ್ಟಡ ಮಾಲೀಕರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು

* ಅಸುರಕ್ಷಿತ ಕಟ್ಟಡಗಳನ್ನು ಪರಿಶೀಲಿಸಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ತಕ್ಷಣ ನೋಟಿಸ್ ಜಾರಿ ಮಾಡಬೇಕು. * ಚಿಕ್ಕಪೇಟೆ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು

ಎಲೆ ಸಂಸ್ಕರಣ ಘಟಕ ಕಡ್ಡಾಯ

ಜಿಬಿಎ ವ್ಯಾಪ್ತಿಯಲ್ಲಿರುವ ಎಲ್ಲಾ ಉದ್ಯಾನಗಳಲ್ಲಿ ಎಲೆ ಸಂಸ್ಕರಣ ಘಟಕಗಳನ್ನು ಕಡ್ಡಾಯವಾಗಿ ಅಳವಡಿಸಲು ಕ್ರಮ ಕೈಗೊಳ್ಳುವಂತೆ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಆಯುಕ್ತರ ಕಚೇರಿಯಲ್ಲಿ ಗುರುವಾರ ನಡೆಸಿದ ಸಾರ್ವಜನಿಕ ಸಂಪರ್ಕ ಸಭೆಯಲ್ಲಿ ಅವರು ಮಾತನಾಡಿದರು.

ಉದ್ಯಾನಗಳ ಮರಗಳು ಮತ್ತು ಸಸಿಗಳಿಂದ ಉದುರುವ ಎಲೆಗಳನ್ನು ಮೂಲದಲ್ಲಿಯೇ ಸಂಸ್ಕರಿಸಿ ಗೊಬ್ಬರ ತಯಾರಿಸಿ ಅದೇ ಉದ್ಯಾನವನಗಳ ನಿರ್ವಹಣೆಗೆ ಬಳಸಿಕೊಳ್ಳಬಹುದಾಗಿದೆ ಎಂದರು.

ಸಾರ್ವಜನಿಕ ಸಂಪರ್ಕ ಸಭೆಯಲ್ಲಿ ಕಸದ ಸಮಸ್ಯೆ ಪಾದಚಾರಿ ಮಾರ್ಗ ದುರಸ್ತಿ ಅನಧಿಕೃತ ಪಾರ್ಕಿಂಗ್ ಡಾಂಬರೀಕರಣ ಬಿಡಾಡಿ ಹಸುಗಳ ನಿಯಂತ್ರಣ ವಿದ್ಯುತ್ ದೀಪಗಳ ನಿರ್ವಹಣೆ ಪಾರ್ಕ್ ನಿರ್ವಹಣೆ ಅನಧಿಕೃತ ಕಟ್ಟಡ ನಿರ್ಮಾಣ ಸೇರಿದಂತೆ ವಿವಿಧ ದೂರುಗಳು ದಾಖಲಾಗಿವೆ. ಸ್ವೀಕರಿಸಲಾದ ದೂರುಗಳಲ್ಲಿ ಶೇ 60 ರಷ್ಟನ್ನು ವಾರದೊಳಗಾಗಿ ಇತ್ಯರ್ಥಗೊಳಿಸಲಾಗುವುದು. ಉಳಿದ ಶೇ 40ರಷ್ಟು ದೂರುಗಳು ದೀರ್ಘಕಾಲಿಕ ಸಮಸ್ಯೆಗಳಾಗಿರುವುದರಿಂದ ಅವುಗಳನ್ನು ಆದ್ಯತೆಯ ಮೇರೆಗೆ ತ್ವರಿತವಾಗಿ ಬಗೆಹರಿಸಲು ಅಧಿಕಾರಿಗಳಿಗೆ ತಿಳಿಸಲಾಗಿದೆ. ಮುಂದಿನ ತಿಂಗಳೂ ಸಾರ್ವಜನಿಕ ಸಂಪರ್ಕ ಸಭೆ ನಡೆಸಲಾಗುತ್ತದೆ ಎಂದು ನಗರ ಪಾಲಿಕೆಯ ಆಡಳಿತಾಧಿಕಾರಿ ಆಗಿರುವ ಮಹೇಶ್ವರ್ ರಾವ್ ತಿಳಿಸಿದರು.

ಬೆಂಗಳೂರು ಕೇಂದ್ರ ನಗರ ಪಾಲಿಕೆ ಆಯುಕ್ತರಾದ ರಾಜೇಂದ್ರ ಚೋಳನ್ ಮಾತನಾಡಿ ಪ್ರಮುಖ ರಸ್ತೆಗಳಲ್ಲಿ ಅನಧಿಕೃತ ಪಾರ್ಕಿಂಗ್ ತಪ್ಪಿಸಲು ಅಭಿಯಾನ ನಡೆಸುವಂತೆ ಜಂಟಿ ಆಯುಕ್ತರಿಗೆ ಸೂಚನೆ ಹಾಗೂ ಸಮರ್ಪಕ ತ್ಯಾಜ್ಯ ನಿರ್ವಹಣೆ ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.