ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಗೌರವ ಗುಪ್ತ ನೇತೃತ್ವದಲ್ಲಿ ಸಮಿತಿ ರಚನೆ: ಕೆ.ಜೆ. ಜಾರ್ಜ್‌

Published 24 ಡಿಸೆಂಬರ್ 2023, 14:10 IST
Last Updated 24 ಡಿಸೆಂಬರ್ 2023, 14:10 IST
ಅಕ್ಷರ ಗಾತ್ರ

ಬೆಂಗಳೂರು: ‘ಕೆಪಿಟಿಸಿಎಲ್ ಮತ್ತು ಎಸ್ಕಾಂಗಳ ತಾಂತ್ರಿಕ ವಿಭಾಗದಲ್ಲಿ 15-20 ವರ್ಷಗಳಿಂದ ಕೆಲಸ ಮಾಡುತ್ತಿರುವ ಹೊರಗುತ್ತಿಗೆ ನೌಕರರನ್ನು ಒಳಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲು ಸರ್ಕಾರ ಚಿಂತನೆ ನಡೆಸಿದೆ. ಈ ಹಿನ್ನೆಲೆಯಲ್ಲಿ ಸಾಧಕ-ಬಾಧಕಗಳ ಬಗ್ಗೆ ಪರಿಶೀಲಿಸಲು ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ’ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು.

‘ಸ್ಟೇಷನ್ ಆಪರೇಟರ್‌ಗಳು, ಸ್ಟೇಷನ್ ಸಹಾಯಕರು, ಗ್ಯಾಂಗ್‌ಮೆನ್ ಮತ್ತು ಮೀಟರ್ ರೀಡರ್ ಹುದ್ದೆಗಳಲ್ಲಿ ಸಾಕಷ್ಟು ಮಂದಿ ಹಲವು ವರ್ಷಗಳಿಂದ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಸೇವಾ ಭದ್ರತೆ ಒದಗಿಸಿ ಒಳಗುತ್ತಿಗೆ ವ್ಯಾಪ್ತಿಗೆ ತರಲು ಸರ್ಕಾರ ಯೋಚಿಸಿದೆ. ಕಾನೂನಿನ ಅವಕಾಶಗಳನ್ನು ಪರಿಶೀಲಿಸಲಾಗುತ್ತಿದೆ‘ ಎಂದು ಸುದ್ದಿಗಾರರಿಗೆ ಮಾಹಿತಿ ನೀಡಿದರು.

ಸಮಿತಿಯು ಈಗಾಗಲೇ ಒಂದು ಸುತ್ತಿನ ಸಮಾಲೋಚನೆ ನಡೆಸಿದೆ. ಡಿ. 29 ರೊಳಗೆ ವರದಿ ಸಲ್ಲಿಸಲು ಸೂಚಿಸಲಾಗಿದೆ. ಈ ವರದಿ ಆಧರಿಸಿ ಸರಕಾರ ಮುಂದಿನ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT