ಬೆಂಗಳೂರು: ನಗರದ ಹೆಲ್ತ್ ಕೇರ್ ಗ್ಲೋಬಲ್ ಎಂಟರ್ಪ್ರೈಸಸ್ನಲ್ಲಿ (ಎಚ್ಸಿಜಿ) ನಿಯಮ ಬಾಹಿರ ವೈದ್ಯಕೀಯ ಪ್ರಯೋಗದ ಆರೋಪಕ್ಕೆ ಸಂಬಂಧಿಸಿದಂತೆ, ಪರಿಶೀಲನೆ ನಡೆಸಿ ವರದಿ ನೀಡಲು ಕೇಂದ್ರ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆಯು (ಸಿಡಿಎಸ್ಸಿಒ) ತಜ್ಞರ ಸಮಿತಿ ರಚಿಸಿ ಆದೇಶ ಹೊರಡಿಸಿದೆ.

ಕೇಂದ್ರ ಸಹಾಯಕ ಔಷಧ ನಿಯಂತ್ರಕ ಡಾ. ಬಿಕಾಶ್ ರಾಯ್, ಸಿಡಿಎಸ್ಸಿಒ ಬೆಂಗಳೂರು ವಲಯ ಕಚೇರಿ ಔಷಧ ನಿರೀಕ್ಷಕಿ ಸುನಿತಾ ಜೋಶಿ, ಸಿಡಿಎಸ್ಸಿಒ ನವದೆಹಲಿಯ ಪ್ರಧಾನ ಕಚೇರಿ ಅಧಿಕಾರಿಗಳು ಮತ್ತು ವಿಷಯ ತಜ್ಞರನ್ನು ಸಮಿತಿ ಒಳಗೊಂಡಿದೆ. ಈ ಸಮಿತಿಯು ಇದೇ 3 ರಿಂದ 5ರವೆರೆಗೆ ಎಚ್ಸಿಜಿ ಆಸ್ಪತ್ರೆಯಲ್ಲಿ ಪರಿಶೀಲನೆ ನಡೆಸಲಿದೆ.

‘ಎಚ್ಸಿಜಿ ಆಸ್ಪತ್ರೆಯಲ್ಲಿ ನಿಯಮ ಬಾಹಿರ ವೈದ್ಯಕೀಯ ಪ್ರಯೋಗ ನಡೆಸಲಾಗುತ್ತಿದೆ’ ಎಂದು ಎಚ್ಸಿಜಿಯ ಸಾಂಸ್ಥಿಕ ನೀತಿ ಸಮಿತಿಯ ಮುಖ್ಯಸ್ಥರಾಗಿದ್ದ ನಿವೃತ್ತ ನ್ಯಾಯಮೂರ್ತಿ ಪಿ.ಕೃಷ್ಣ ಭಟ್ ಅವರು ಆರೋಪಿಸಿ, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಆರೋಪದ ಅನುಸಾರ ಸೂಕ್ತ ತನಿಖೆ ನಡೆಸುವಂತೆ ಆರೋಗ್ಯ ಇಲಾಖೆ ಆಯುಕ್ತರು ಭಾರತೀಯ ಪ್ರಧಾನ ಔಷಧ ನಿಯಂತ್ರಕರಿಗೆ ಪತ್ರ ಬರೆದು, ಮನವಿ ಮಾಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.