ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾರ್ಷಲ್‌ ಸೇವೆ ಅಗತ್ಯತೆ ಪರಿಶೀಲನೆಗೆ ಸಮಿತಿ

Published 5 ಡಿಸೆಂಬರ್ 2023, 20:02 IST
Last Updated 5 ಡಿಸೆಂಬರ್ 2023, 20:02 IST
ಅಕ್ಷರ ಗಾತ್ರ

ಬೆಂಗಳೂರು: ಬಿಬಿಎಂಪಿ ಘನತ್ಯಾಜ್ಯ ವಿಭಾಗದಲ್ಲಿ ಮಾರ್ಷಲ್ ಸಿಬ್ಬಂದಿ ಸೇವೆ ಅಗತ್ಯದ ಕುರಿತಂತೆ ಪರಿಶೀಲನೆ ನಡೆಸಿ, ವರದಿ ನೀಡಲು ಹಿರಿಯ ಅಧಿಕಾರಿಗಳ ಸಮಿತಿ ರಚಿಸಲಾಗಿದೆ.

ಆರೋಗ್ಯ ವಿಭಾಗದ ವಿಶೇಷ ಆಯುಕ್ತರು ಅಧ್ಯಕ್ಷರಾಗಿರುವ ಸಮಿತಿಯಲ್ಲಿ ಆಡಳಿತ, ಹಣಕಾಸು, ಯೋಜನೆಯ ವಿಶೇಷ ಆಯುಕ್ತರು, ಘನತ್ಯಾಜ್ಯ ನಿರ್ವಹಣೆ ವಿಭಾಗದ ಜಂಟಿ ಆಯುಕ್ತರು, ಮುಖ್ಯ ಆರೋಗ್ಯಾಧಿಕಾರಿ ಸದಸ್ಯರಾಗಿದ್ದು, ಆಡಳಿತದ ಉಪ ಆಯುಕ್ತರು ಸಮನ್ವಯಾಧಿಕಾರಿಯಾಗಿದ್ದಾರೆ.

ಘನತ್ಯಾಜ್ಯ ನಿರ್ವಹಣೆ ವಿಭಾಗದಲ್ಲಿ ಮಾರ್ಷಲ್‌ಗಳನ್ನು ಮುಂದುವರಿಸಬೇಕೇ, ಅದರ ಅಗತ್ಯವಿದೆಯೇ ಎಂಬ ಸಮಗ್ರ ವರದಿಯನ್ನು ನೀಡಬೇಕು ಎಂದು ಮುಖ್ಯ ಆಯುಕ್ತರು ಸಮಿತಿಗೆ ಸೂಚಿಸಿದ್ದಾರೆ.

‘ಮಾರ್ಷಲ್‌ಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ, ಅವರ ಸೇವೆಯಿಂದ ಪಾಲಿಕೆಗೆ ಯಾವುದೇ ಪ್ರಯೋಜನ ಇಲ್ಲ. ಇವರಿಗೆ ವೇತನ ಪಾವತಿ ಮಾಡುತ್ತಿರುವುದರಿಂದ ಪಾಲಿಕೆಗೆ ಆರ್ಥಿಕ ನಷ್ಟ ಉಂಟಾಗುತ್ತಿದೆ. ಇವರ ಸೇವೆ ಸ್ಥಗಿತೊಳಿಸಬೇಕು’ ಎಂದು ಬೆಂಗಳೂರು ದಕ್ಷಿಣ ಬಿಜೆಪಿ ಘಟಕದ ಅಧ್ಯಕ್ಷ ರಮೇಶ್‌ ಎನ್‌.ಆರ್‌ ಅವರು ಸಲ್ಲಿಸಿದ್ದ ಪತ್ರವನ್ನು ಉಲ್ಲೇಖಿಸಿ ಸಮಿತಿ ರಚನೆ ಮಾಡಲಾಗಿದೆ.

‘ಪಾಲಿಕೆಯಲ್ಲಿ 750 ಮಾರ್ಷಲ್‌ಗಳನ್ನು ಬಳಸಿಕೊಂಡು ಘನತ್ಯಾಜ್ಯ ನಿರ್ವಹಣೆ ವಿಭಾಗ, ಇಂದಿರಾ ಕಾಂಟೀನ್‌, ವರ್ತೂರು ಮತ್ತು ಬೆಳ್ಳಂದೂರು ಕೆರೆಗಳಲ್ಲಿ ಕಾರ್ಯ ನಿರ್ವಹಿಸಲಾಗುತ್ತಿದೆ ಎಂದು ಮಾಹಿತಿ ನೀಡಲಾಗುತ್ತಿದೆ. ಇದು ಸತ್ಯಕ್ಕೆ ದೂರವಾಗಿದ್ದು, ಪ್ರತಿ ವರ್ಷ ಕೋಟ್ಯಂತರ ರೂಪಾಯಿ ವಂಚನೆ ನಡೆಯುತ್ತಿದೆ. ದಾಖಲೆಗಳನ್ನು ಪತ್ರದೊಂದಿಗೆ ಲಗತ್ತಿಸಲಾಗಿದೆ. ಈ ಬಗ್ಗೆ ತನಿಖೆ ನಡೆಸಬೇಕು’ ಎಂದು ರಮೇಶ್‌ ಮನವಿ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT