ಬೆಂಗಳೂರು: ‘ದೇಶದಲ್ಲಿ ಕೋಮುವಾದಿ ಹಾಗೂ ಮನುವಾದಿ ಶಕ್ತಿಗಳು ಹುಚ್ಚೆದ್ದು ಕುಣಿಯುತ್ತಿವೆ. ಜಾತಿಯ ಹೆಸರಿನಲ್ಲಿ ಒಡೆದು ಆಳುವ ನೀತಿಯನ್ನು ಅನುಸರಿಸುತ್ತಿದ್ದು, ಸಮಾಜವನ್ನು ವಿಭಜಿಸುವ ಕೆಲಸ ಮಾಡುತ್ತಿವೆ. ಇದು ದೇಶದ ಏಕತೆ ಮತ್ತು ಸಮಗ್ರತೆಗೆ ಮಾರಕವಾಗಿದೆ’ ಎಂದು ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಕಳವಳ ವ್ಯಕ್ತಪಡಿಸಿದರು.

ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಹಾಗೂ ನಾಗಪುರದ ಬುದ್ಧಿಸ್ಟ್ ಅಕಾಡೆಮಿ ಆಫ್ ಪರ್ಫಾರ್ಮಿಂಗ್ ಆರ್ಟ್ ಸಹಯೋಗದಲ್ಲಿ ಭಾನುವಾರ ಆಯೋಜಿಸಿದ್ದ ‘ಮಹಾನಾಯಕ ಸಾಮ್ರಾಟ್ ಅಶೋಕ’ ನಾಟಕ ಪ್ರದರ್ಶನದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಜಾತಿರಹಿತ ಸಮಸಮಾಜ ನಿರ್ಮಿಸುವುದಕ್ಕೆ ಬುದ್ಧ, ಬಸವ ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ಸೇರಿದಂತೆ ಅನೇಕ ನಾಯಕರು ಹೋರಾಟ ನಡೆಸಿದ್ದಾರೆ. ಆದರೆ ಇದುವರೆಗೂ ಅದು ಸಾಧ್ಯವಾಗಿಲ್ಲ. ಇಂದಿಗೂ ಸಮಾಜದಲ್ಲಿ ಜಾತೀಯತೆ, ಮೂಢನಂಬಿಕೆ, ಅಸ್ಪೃಶ್ಯತೆ ಆಚರಣೆಯಲ್ಲಿದೆ’ ಎಂದು ಹೇಳಿದರು.

‘ಸಾಮ್ರಾಟ ಅಶೋಕನ ಆಡಳಿತ ಕಾಲದಲ್ಲಿ ಎಲ್ಲ ಧರ್ಮಗಳನ್ನು ಗೌರವಿಸಲಾಗುತ್ತಿತ್ತು. ಅಶೋಕನ ತತ್ವ ಸಿದ್ಧಾಂತಗಳು ಇಂದಿಗೂ ಪ್ರಸ್ತುತವಾಗಿದ್ದು, ಇಂದಿನ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇವುಗಳನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ನಾವು ಕೆಲಸ ಮಾಡಬೇಕು. ಎಲ್ಲರೂ ಬುದ್ಧ, ಬಸವ ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ಅವರ ತತ್ವ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದರು.

‘ದೇಶದಲ್ಲಿರುವ 140 ಕೋಟಿ ಜನ ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ ಸಬಲರಾದಾಗ ಮಾತ್ರ ನಮ್ಮ ದೇಶ ಬಲಾಢ್ಯವಾಗಲಿದೆ. ವಿಶೇಷವಾಗಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು, ಮಹಿಳೆಯರು, ರೈತರು, ಕಾರ್ಮಿಕರ ಅಭಿವೃದ್ಧಿಗೆ ಒತ್ತು ನೀಡಬೇಕಿದೆ’ ಎಂದು ಹೇಳಿದರು.

ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ, ಸ್ಕೌಟ್ಸ್ ಮತ್ತು ಗೈಡ್ಸ್ನ ರಾಜ್ಯ ಆಯುಕ್ತ ಪಿ.ಜಿ.ಆರ್. ಸಿಂಧ್ಯ, ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಘಟಕದ ಅಧ್ಯಕ್ಷ ಡಿ.ಜಿ. ಸಾಗರ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.