ಶನಿವಾರ, ಜನವರಿ 25, 2020
28 °C

ಸಂವಹನ ಸಮ್ಮೇಳನ ನಾಳೆಯಿಂದ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಆರ್‌.ಆರ್‌.ನಗರದ ಆರ್‌ಎನ್‌ಎಸ್ ತಾಂತ್ರಿಕ ಶಿಕ್ಷಣ ಸಂಸ್ಥೆಯು ಡೇಟಾ ಎಂಜಿನಿಯರಿಂಗ್‌ ಹಾಗೂ ಸಂವಹನ ವ್ಯವಸ್ಥೆಗಳ ಅಂತರರಾಷ್ಟ್ರೀಯ ಸಮ್ಮೇಳನವನ್ನು ಇದೇ 19 ಮತ್ತು 20ರಂದು ಸಂಸ್ಥೆಯ ಆವರಣದಲ್ಲಿ ಆಯೋಜಿಸಿದೆ ಎಂದು ಸಂಸ್ಥೆಯ ಉಪಪ್ರಾಂಶುಪಾಲ ಡಾ.ಬಿ.ಟಿ.ರಾಜು ತಿಳಿಸಿದರು.

ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,‘ಅತಿಥಿಯಾಗಿ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (ವಿಟಿಯು) ಕುಲಪತಿ ಡಾ.ಕೃಷ್ಣಯ್ಯ ಭಾಗವಹಿಸಲಿದ್ದಾರೆ. ಸಮ್ಮೇಳನದಲ್ಲಿ 300ಕ್ಕೂ ಹೆಚ್ಚು ತಜ್ಞರು ವಿಷಯ ಮಂಡಿಸಲಿದ್ದಾರೆ. ನೂತನ ತಂತ್ರಜ್ಞಾನ, ಹೊಸ ಬೆಳವಣಿಗೆಗಳು, ಡೇಟಾ ಎಂಜಿನಿಯರಿಂಗ್, ಸಂವಹನ ವ್ಯವಸ್ಥೆಯ ಕುರಿತು ಗೋಷ್ಠಿಗಳು ನಡೆಯಲಿವೆ’ ಎಂದು ತಿಳಿಸಿದರು.

 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು