ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನ್ನಡ ಕಲಿಕೆ ಒಂದು ವರ್ಷಕ್ಕೆ ಸೀಮಿತ: ಖಂಡನೆ

Last Updated 19 ಜೂನ್ 2021, 20:22 IST
ಅಕ್ಷರ ಗಾತ್ರ

ಬೆಂಗಳೂರು: ನೂತನ ಶಿಕ್ಷಣ ನೀತಿ ಅನ್ವಯ, ನಾಲ್ಕು ವರ್ಷಗಳ ಪದವಿಯಲ್ಲಿ ಕನ್ನಡ ಭಾಷಾ ಕಲಿಕೆಯನ್ನು ಕೇವಲ ಒಂದು ವರ್ಷಕ್ಕೆ ಸೀಮಿತಗೊಳಿಸಿರುವ ಸರ್ಕಾರದ ನಿರ್ಧಾರವನ್ನು ಭಾರತ ಕಮ್ಯುನಿಸ್ಟ್‌ ಪಕ್ಷದ (ಮಾರ್ಕ್ಸ್‌ವಾದಿ) ರಾಜ್ಯ ಸಮಿತಿ ಕಾರ್ಯದರ್ಶಿ ಯು.ಬಸವರಾಜ ಖಂಡಿಸಿದ್ದಾರೆ.

‘ರಾಜ್ಯ ಸರ್ಕಾರದ ಕ್ರಮವು ವಿದ್ಯಾರ್ಥಿ ಹಾಗೂ ಕನ್ನಡ ಭಾಷೆಯ ವಿರೋಧಿಯಾಗಿದ್ದು ಇದನ್ನು ತಕ್ಷಣವೇ ಹಿಂಪಡೆಯಬೇಕು’
ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಬರೆದಿರುವ ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಲಸಿಕೆ ಪಡೆಯಲು ಗ್ರಾಮೀಣರಿಗೆ ಮನವೊಲಿಸಿ: ‘ಕೋವಿಡ್‌ ಲಸಿಕೆ ಪಡೆಯುವ ಕುರಿತು ಗ್ರಾಮೀಣ ಭಾಗದ ಜನರಲ್ಲಿ ಸಾಕಷ್ಟು ಆತಂಕವಿದೆ. ಇದನ್ನು ಪರಿ ಹರಿಸಲು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳ ಬೇಕು. ಲಸಿಕೆ ಪಡೆಯುವಂತೆ ಜನರ ಮನವೊಲಿಸುವ ಕೆಲಸ ಆಗಬೇಕು. ಬಲವಂತದಿಂದ ಲಸಿಕೆ ನೀಡುವುದನ್ನು ಕೂಡಲೇ ನಿಲ್ಲಿಸಬೇಕು. ಹಾಗೇನಾದರು ಮಾಡಿದರೆ ಅದು ಮಾನವ ಹಕ್ಕುಗಳ ಉಲ್ಲಂಘನೆಯಾಗಲಿದೆ. ಇದರಿಂದ ಜನರಲ್ಲಿರುವ ಆತಂಕ ಮತ್ತಷ್ಟು ಹೆಚ್ಚಲಿದೆ’ ಎಂದೂ
ಯು. ಬಸವರಾಜ ಅವರು ಪತ್ರದಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT