ಶನಿವಾರ, 24 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯೇಂದ್ರ ನೇತೃತ್ವದಲ್ಲಿ ಸಮರ್ಥ ತಂಡ ಸಿದ್ಧ: ಮಹೇಶ್‌

Published 26 ಡಿಸೆಂಬರ್ 2023, 19:59 IST
Last Updated 26 ಡಿಸೆಂಬರ್ 2023, 19:59 IST
ಅಕ್ಷರ ಗಾತ್ರ

ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಸಮರ್ಥ ತಂಡ ರಚನೆಯಾಗಿದೆ ಎಂದು ಪಕ್ಷದ ಉಪಾಧ್ಯಕ್ಷ ಎನ್.ಮಹೇಶ್‌ ಹೇಳಿದರು.

ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಸಾಮಾಜಿಕ, ಭೌಗೋಳಿಕ ಆಯಾಮಗಳನ್ನು ಒಳಗೊಂಡ ವ್ಯವಸ್ಥಿತ ತಂಡ ರಚಿಸಲಾಗಿದೆ. 2024 ರ ಲೋಕಸಭಾ ಚುನಾವಣೆಯನ್ನು ಬಿಜೆಪಿ ಸಮರ್ಥವಾಗಿ ಎದುರಿಸಲಿದೆ ಎಂದರು.

ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ಸಾಕಷ್ಟು ಆಕಾಂಕ್ಷಿಗಳಿದ್ದಾರೆ. ಕೇಂದ್ರದ ವರಿಷ್ಠರ ತೀರ್ಮಾನಕ್ಕೆ ಬದ್ಧ. ಕ್ಷೇತ್ರವನ್ನು  ಚಾಮರಾಜನಗರ ಲೋಕಸಭಾ ಕ್ಷೇತ್ರ ಶ್ರೀನಿವಾಸಪ್ರಸಾದ್ ಅವರು ಪ್ರತಿನಿಧಿಸುವ ಕ್ಷೇತ್ರ. ಈ ಕ್ಷೇತ್ರವನ್ನು ಈ ಬಾರಿಯೂ ಬಿಜೆಪಿ ಉಳಿಸಿಕೊಳ್ಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT