‘ಸರ್ಕಾರಿ ನೌಕರರಿಗೆ ಕರೆ ಮಾಡಿ, ನಿಮ್ಮ ವಿರುದ್ಧ ಪ್ರಕರಣ ದಾಖಲಿಸದೇ ಇರಲು ಅಥವಾ ಪ್ರಕರಣ ರದ್ದುಪಡಿಸಲು ಹಣ ನೀಡುವಂತೆ ಕೆಲವರು ಒತ್ತಾಯಿಸುತ್ತಿರುವ ಬಗ್ಗೆ ದೂರು ಬಂದಿದೆ. ಲೋಕಾಯುಕ್ತದಿಂದ ಯಾವುದೇ ವ್ಯಕ್ತಿಗಳು ಹಾಗೆ ಕರೆ ಮಾಡುವುದಿಲ್ಲ. ಅಂತಹ ಕರೆ ಬಂದರೆ, ಅದು ವಂಚಕರದ್ದಾಗಿರುತ್ತದೆ’ ಎಂದು ಲೋಕಾಯುಕ್ತವು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.