ಬೆಂಗಳೂರು: ‘ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಾಗೂ ಕುಟುಂಬದವರ ಬಗ್ಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ’ ಎಂದು ಆರೋಪಿಸಿ ಗಾಂಧಿನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಜೆ. ಸರವಣನ್ ಅವರು ಶೇಷಾದ್ರಿಪುರ ಠಾಣೆಗೆ ಶನಿವಾರ ದೂರು ನೀಡಿದ್ದಾರೆ.

ದೂರು ಸ್ವೀಕರಿಸಿರುವ ಪೊಲೀಸರು, ‘ಯತ್ನಾಳ ವಿಜಯಪುರದಲ್ಲಿ ಮಾತನಾಡಿದ್ದಾರೆ. ಕೃತ್ಯ ನಡೆದ ಆಧಾರದಲ್ಲಿ ವಿಜಯಪುರ ಜಿಲ್ಲಾ ಪೊಲೀಸರಿಗೆ ದೂರು ಹಸ್ತಾಂತರಿಸಲಾಗುವುದು’ ಎಂದಿದ್ದಾರೆ.

‘ದಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಬಗ್ಗೆ ಏಪ್ರಿಲ್ 6ರಂದು ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ್ದ ಶಾಸಕ ಯತ್ನಾಳ, ‘ಸಚಿವ ದಿನೇಶ್ ಗುಂಡೂರಾವ್ ಅವರ ಮನೆಯಲ್ಲಿ ಅರ್ಧ ಪಾಕಿಸ್ತಾನವಿದೆ. ದೇಶ ವಿರೋಧಿ ಹೇಳಿಕೆ ನೀಡುವುದು ಅವರ ಚಟವಾಗಿದೆ’ ಎಂಬುದಾಗಿ ಹೇಳಿದ್ದರು. ಈ ಮೂಲಕ ದಿನೇಶ್ ಗುಂಡೂರಾವ್ ಹಾಗೂ ಅವರ ಕುಟುಂಬದವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ. ಕೋಮು ಸೌಹಾರ್ದ ಹಾಳು ಮಾಡುವ ದುರುದ್ದೇಶದಿಂದ ಯತ್ನಾಳ ಈ ರೀತಿ ಮಾತನಾಡಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ’ ಎಂದು ಸರವಣನ್ ದೂರಿನಲ್ಲಿ ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.