ಗುರುವಾರ , ಫೆಬ್ರವರಿ 20, 2020
20 °C

₹20 ಕೋಟಿ ಲೂಟಿ ಆರೋಪ, ಎಸಿಬಿಗೆ ದೂರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಶ್ರೀ ಮಲೈ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಲ್ಲಿ ₹20 ಕೋಟಿಗೂ ಹೆಚ್ಚು ಹಣ ಲೂಟಿ ಮಾಡಲಾಗಿದೆ ಎಂದು ನಗರ ಜಿಲ್ಲಾ ಬಜೆಪಿ ವಕ್ತಾರ ಎನ್.ಆರ್.ರಮೇಶ್‌ ಆರೋಪಿಸಿದ್ದಾರೆ. 

ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಅಪರ ಜಿಲ್ಲಾಧಿಕಾರಿಯಿಂದ ಕುಮ್ಮಕ್ಕು ಪಡೆದು ಎಂ. ಬಸವರಾಜು ಎಂಬಾತನಿಂದ ಕಳೆದ 4 ವರ್ಷಗಳಿಂದ ನಿರಂತರವಾಗಿ ಲೂಟಿ ಮಾಡಲಾಗಿದೆ ಎಂದು ಆರೋಪಿಸಿ ಎನ್‌.ಆರ್‌. ರಮೇಶ್‌ ಶುಕ್ರವಾರ ಎಸಿಬಿಗೆ ದೂರು ನೀಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಅಪರ ಜಿಲ್ಲಾಧಿಕಾರಿ ಶ್ರೀಮತಿ. ಡಿ. ಭಾರತಿ, ಉಪ ಕಾರ್ಯದರ್ಶಿ ಎಂ.ಬಸವರಾಜು, ಲೆಕ್ಕಾಧೀಕ್ಷಕ ಮಹದೇವಸ್ವಾಮಿ ಮತ್ತು ಮಹೇಶ್ ಕುಮಾರ್ ವಿರುದ್ಧ ಕ್ರಮ ಜರುಗಿಸುವಂತೆ ಆಗ್ರಹಿಸಿದ್ದಾರೆ. 
 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು