ಸೋಮವಾರ, ನವೆಂಬರ್ 30, 2020
19 °C

ಬಿಡಿಎ ಭ್ರಷ್ಟಾಚಾರ: ಎಸಿಬಿಗೆ ದೂರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಹಾಗೂ ಸರ್ಕಾರದ ವಿವಿಧ ಕಾಮಗಾರಿಗಳಲ್ಲಿ ನಡೆದ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸುವಂತೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವು ಭ್ರಷ್ಟಾಚಾರ ನಿಗ್ರಹ ದಳಕ್ಕೆ (ಎಸಿಬಿ) ದೂರು ನೀಡಿದೆ.

ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ರವಿ ಕೃಷ್ಣಾರೆಡ್ಡಿ ಈ ದೂರು ನೀಡಿದ್ದಾರೆ.

'ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕಚೇರಿ ಸಿಬ್ಬಂದಿ  ಈ ಹಿಂದೆ ಬಿಡಿಎ ಆಯುಕ್ತರಾಗಿದ್ದ ಜಿ.ಎಸ್.ಪ್ರಕಾಶ್ ಅವರೊಂದಿಗೆ ಸೇರಿಕೊಂಡು ಈ ಭ್ರಷ್ಟಾಚಾರ ನಡೆಸಿದ್ದಾರೆ. ಅಪಾರ್ಟ್‍ಮೆಂಟ್ ಸಮುಚ್ಛಯಗಳ ಕಾಮಗಾರಿ ಗುತ್ತಿಗೆದಾರರಿಂದ ಭಾರಿ ಲಂಚ ಪಡೆದಿದ್ದಾರೆ. ಈ ಕುರಿತು ಎಸಿಬಿ ತನಿಖೆ ನಡೆಸಬೇಕು' ಎಂದು ದೂರಿನಲ್ಲಿ ಪ್ರತಿಪಾದಿಸಲಾಗಿದೆ.

'ಲಂಚವಾಗಿ ಪಡೆದಿರುವ ಹಣವನ್ನು ಅಕ್ರಮ ವರ್ಗಾವಣೆ ಮಾಡಲಾಗಿದ್ದು, ಈ ಕುರಿತು ಜಾರಿ ನಿರ್ದೇಶನಾಲಯ (ಇಡಿ) ತನಿಖೆ ಮಾಡಬೇಕು. ಈ ಸಂದರ್ಭದಲ್ಲಿ ಆದಾಯ ತೆರಿಗೆ ಮತ್ತು ಜಿಎಸ್‍ಟಿ ವಂಚಿಸಿರುವ ಸಾಧ್ಯತೆ ಇರುವುದರಿಂದ ಈ ಬಗ್ಗೆಯೂ ತನಿಖೆಯಾಗಬೇಕೆಂದು ಒತ್ತಾಯಿಸಿ ಆದಾಯ ತೆರಿಗೆ ಇಲಾಖೆಗೆ  ದಾಖಲೆಗಳ ಸಮೇತ ದೂರು ದಾಖಲಿಸಿದ್ದೇವೆ' ಎಂದೂ ರವಿಕೃಷ್ಣಾ ರೆಡ್ಡಿ ತಿಳಿಸಿದ್ದಾರೆ.

‘ಈ ಪ್ರಕರಣದ ಬಗ್ಗೆ ಎಲ್ಲ ದಾಖಲೆಗಳನ್ನು ಪ್ರಧಾನಿ ನರೇಂದ್ರ ಮೋದಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಹಾಗೂ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೂ ಕಳುಹಿಸಲಾಗುವುದು’ ಎಂದೂ ಅವರು ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು