ಸೋಮವಾರ, 11 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಹುಲ್ ಗಾಂಧಿ ಅವಹೇಳನ: ಎನ್‌ಸಿಆರ್ ದಾಖಲು

Published 6 ಅಕ್ಟೋಬರ್ 2023, 16:33 IST
Last Updated 6 ಅಕ್ಟೋಬರ್ 2023, 16:33 IST
ಅಕ್ಷರ ಗಾತ್ರ

ಬೆಂಗಳೂರು: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಪ್ರಕಟಿಸಿ ಸುಳ್ಳು ಸುದ್ದಿ ಹರಿಬಿಟ್ಟು ಅಪಪ್ರಚಾರ ಮಾಡುತ್ತಿರುವ ಆರೋಪದಡಿ ಕೇಂದ್ರ ವಿಭಾಗದ ಸೈಬರ್ ಕ್ರೈಂ ಠಾಣೆಯಲ್ಲಿ ಎನ್‌ಸಿಆರ್ ದಾಖಲಾಗಿದೆ.

‘ಅವಹೇಳನಕಾರಿ ಪೋಸ್ಟ್ ಬಗ್ಗೆ ಕೆಪಿಸಿಸಿ ಪ್ರಚಾರ ಸಮಿತಿ ಪ್ರಧಾನ ಕಾರ್ಯದರ್ಶಿ ವೈ. ಪುಟ್ಟರಾಜು ದೂರು ನೀಡಿದ್ದಾರೆ. ಅಪರಿಚಿತರ ವಿರುದ್ಧ ಎನ್‌ಸಿಆರ್ (ಗಂಭೀರವಲ್ಲದ ಪ್ರಕರಣ) ದಾಖಲಿಸಿಕೊಳ್ಳಲಾಗಿದೆ. ನ್ಯಾಯಾಲಯದ ನಿರ್ದೇಶನದಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ಪೊಲೀಸ್ ಮೂಲಗಳು ಹೇಳಿವೆ.

ದೂರಿನ ವಿವರ: ‘ಸಾಮಾಜಿಕ ಮಾಧ್ಯಮ ‘ಎಕ್ಸ್‌’ನಲ್ಲಿ ‘ಬಿಜೆಪಿ@4ಇಂಡಿಯಾ’ ಖಾತೆಯಲ್ಲಿ ರಾಹುಲ್‌ ಗಾಂಧಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಪ್ರಕಟಿಸಲಾಗಿದೆ. ರಾಹುಲ್ ಗಾಂಧಿ ಅವರ ಗೌರವಕ್ಕೆ ಧಕ್ಕೆ ತರುವ ಯತ್ನವಿದು. ಬಿಜೆಪಿಯವರು ಉದ್ದೇಶಪೂರ್ವಕವಾಗಿ ಈ ಕೃತ್ಯ ಎಸಗಿದ್ದಾರೆ’ ಎಂದು ಪುಟ್ಟರಾಜು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

‘ಕಾಂಗ್ರೆಸ್ ಪಕ್ಷ, ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಬಗ್ಗೆ ‘ಜೆಡಿಎಸ್ ಕರುನಾಡು’ ಖಾತೆಯಲ್ಲೂ ಸುಳ್ಳು ಮಾಹಿತಿ ಪ್ರಕಟಿಸಿ ಅಪಪ್ರಚಾರ ಮಾಡಲಾಗುತ್ತಿದೆ. ತಪ್ಪಿತಸ್ಥರನ್ನು ಪತ್ತೆ ಮಾಡಿ ಕಾನೂನು ಕ್ರಮ ಜರುಗಿಸಿ’ ಎಂದು ಅವರು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT