ಬೆಂಗಳೂರು: 'ಮಂಗಳೂರಿನ ಪಿಲಿಕುಳ ನಿಸರ್ಗಧಾಮವನ್ನು ಅಮ್ಯೂಸ್ಮೆಂಟ್ ಪಾರ್ಕ್ನ ರೀತಿಯಲ್ಲಿ ಸಮಗ್ರವಾಗಿ ಅಭಿವೃದ್ದಿಗೊಳಿಸಲು ಚಿಂತನೆ ನಡೆದಿದೆ. ಈ ಬಗ್ಗೆ ಪಿಲಿಕುಳ ಅಭಿವೃದ್ದಿ ಪ್ರಾಧಿಕಾರದ ಸಭೆಯಲ್ಲಿ ಚರ್ಚಿಸಲಾಗುವುದು' ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್. ಎಸ್. ಬೋಸರಾಜು ತಿಳಿಸಿದರು.

ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಧಿಕಾರಿಗಳೊಂದಿಗೆ ಅವರು ಶುಕ್ರವಾರ ಸಭೆ ನಡೆಸಿದರು.

'ಪಿಲಿಕುಳ ನಿಸರ್ಗಧಾಮವನ್ನು ರಾಜ್ಯದ ಪ್ರಮುಖ ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ದಿಗೊಳಿಸಲು ಅವಕಾಶಗಳಿವೆ. ಇಲ್ಲಿ ವಿಫುಲ ಜಾಗವಿದ್ದು ಅಂತರರಾಷ್ಟ್ರೀಯ ಮಟ್ಟದ ಅಮ್ಯೂಸ್ಮೆಂಟ್ ಪಾರ್ಕ್ ನಂತೆ ಅಭಿವೃದ್ದಿ ಪಡಿಸಬಹುದಾಗಿದೆ. ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯನವರು 2018ರಲ್ಲಿ ಉದ್ಘಾಟಿಸಿದ ಪಿಲಿಕುಳ ಅಭಿವೃದ್ದಿ ಪ್ರಾಧಿಕಾರದ ಸಮಿತಿಗೆ ಅನುಮೋದನೆ ನೀಡಿದ್ದಾರೆ. ಈ ಬಗ್ಗೆ ಶೀಘ್ರ ಆದೇಶ ಹೊರಬೀಳಲಿದೆ. ಪ್ರಾಧಿಕಾರದ ಮೊದಲ ಸಭೆಯಲ್ಲಿ ಪಿಲಿಕುಳ ನಿಸರ್ಗಧಾಮದ ಸಮಗ್ರ ಅಭಿವೃದ್ದಿಗೆ ಅಗತ್ಯವಿರುವ ನೀಲಿ ನಕ್ಷೆಯ ಬಗ್ಗೆ ಚರ್ಚಿಸಲಾಗುವುದು. ನಂತರ ಮುಂದಿನ ಬಜೆಟ್ನಲ್ಲಿ ಅಗತ್ಯ ಪ್ರಸ್ತಾವವನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು' ಎಂದ ಸಚಿವರು, ಇದಕ್ಕೆ ಅಗತ್ಯವಿರುವ ಕನ್ಸಲ್ಟೆಂಟ್ ಏಜನ್ಸಿ ನೇಮಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

2025 ಜುಲೈ ನಲ್ಲಿ ಕ್ವಾಂಟಮ್ ಸಮಾವೇಶ: '2025ರ ಜುಲೈ ತಿಂಗಳಲ್ಲಿ ಎರಡು ದಿನಗಳ ಕಾಲ ಕ್ವಾಂಟಮ್ ಸಮಾವೇಶ ಆಯೋಜಿಸಲು ತೀರ್ಮಾನಿಸಲಾಗಿದೆ. ಕ್ವಾಂಟಮ್ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿರುವ ಇತರೆ ದೇಶದ ರಾಯಭಾರಿ ಕಚೇರಿಯೊಂದಿಗೆ ಸಂಪರ್ಕದಲ್ಲಿದ್ದು, ಜ್ಞಾನ ವಿನಿಮಯಕ್ಕೆ ಸಭೆಗೆ ಸಮಯಕ್ಕೆ ಮನವಿ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಿರ್ದೇಶನದಂತೆ ನಮ್ಮ ರಾಜ್ಯ ಕ್ವಾಂಟಮ್ ಕ್ಷೇತ್ರದಲ್ಲಿ ಹೊಸ ಸಾಧನೆಗೆ ಉತ್ತೇಜಿಸುವುದು ಈ ಸಮಾವೇಶದ ಉದ್ದೇಶವಾಗಿದೆ' ಎಂದೂ ತಿಳಿಸಿದ ಸಚಿವರು, ಅಗತ್ಯ ತಯಾರಿ ಆರಂಭಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಾಯಚೂರು, ಚಿಕ್ಕಮಗಳೂರು ಹಾಗೂ ಯಾದಗಿರಿಯಲ್ಲಿ ಹೊಸದಾಗಿ ನಿರ್ಮಿಸಲಾಗುತ್ತಿರುವ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರಗಳ ಪ್ರಕ್ರಿಯೆಯನ್ನು ಚುರುಕುಗೊಳಿಸಬೇಕು. ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನಿರ್ಮಿಸಲು ಯೋಜಿಸಲಾಗಿರುವ ಸೈನ್ಸ್ ಸಿಟಿಗೆ ಅಗತ್ಯ ಭೂಮಿಯನ್ನು ಈಗಾಗಲೇ ಕೆಐಎಡಿಬಿ ನೀಡಿದೆ. ಇದರ ಸರ್ವೆ ಕಾರ್ಯವು ಮುಗಿದಿದ್ದು ಡಿಪಿಆರ್ ರಚನೆಗೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.

ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿ ಏಕ್ರೂಪ್ ಕೌರ್, ಕೆಸ್ಪೆಪ್ಸ್ ವ್ಯವಸ್ಥಾಪಕ ನಿರ್ದೇಶಕ ಸದಾಶಿವ ಪ್ರಭು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.