ಗುರುವಾರ , ಜುಲೈ 16, 2020
23 °C

ಕಂಪ್ಯೂಟರ್ ಮಳಿಗೆ ಮಾಲೀಕನ ಸುಲಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಸವನಗುಡಿ ಇ.ಎ.ಟಿ ರಸ್ತೆಯಲ್ಲಿರುವ ‘ಮಂಜುನಾಥ್ ಡಿಟಿಪಿ’ ಕಂಪ್ಯೂಟರ್‌ ಮಳಿಗೆ ಮಾಲೀಕನಿಗೆ ಮಾರಕಾಸ್ತ್ರ ತೋರಿಸಿ ಸುಲಿಗೆ ಮಾಡಲಾಗಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.

‘ಮೇ 16ರಂದು ನಡೆದಿರುವ ಕೃತ್ಯ ಸಂಬಂಧ ಮಾಲೀಕ ಎಸ್‌. ಮೋಹನ್ (51) ಎಂಬುವರು ದೂರು ನೀಡಿದ್ದಾರೆ. ಮೂವರು ಅಪರಿಚಿತರು ಕೃತ್ಯ ಎಸಗಿದ್ದು, ಅವರ ಪತ್ತೆಗಾಗಿ ತನಿಖೆ ಮುಂದುವರಿದಿದೆ’ ಎಂದು ಪೊಲೀಸರು ಹೇಳಿದರು.

‘ಲಾಕ್‌ಡೌನ್‌ ಸಡಿಲಿಕೆ ಮಾಡಿದ್ದರಿಂದ ಮೋಹನ್ ಮಳಿಗೆ ತೆರೆದಿದ್ದರು. ಸಂಜೆ 4ರ ಸುಮಾರಿಗೆ ಮಳಿಗೆಗೆ ನುಗ್ಗಿದ್ದ ಮೂವರು, ಮಾರಕಾಸ್ತ್ರಗಳನ್ನು ತೋರಿಸಿ ಕೊಲೆ ಮಾಡುವುದಾಗಿ ಬೆದರಿಸಿದ್ದರು.  ನಂತರ, 30 ಗ್ರಾಂ ಚಿನ್ನಾಭರಣ ಹಾಗೂ ₹3000 ನಗದು ಕಿತ್ತುಕೊಂಡು ಪರಾರಿಯಾದರು’ ಎಂದು ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು