ಬೆಂಗಳೂರು: ‘ಕಾಂಗ್ರೆಸ್ ಸರ್ಕಾರದಲ್ಲಿ ಅಹಿಂದ ಸಮುದಾಯಗಳನ್ನು ಪಟ್ಟಭದ್ರ ಹಿತಾಸಕ್ತಿಗಳು ರಾಜಕೀಯವಾಗಿ ಗುರಿ ಮಾಡುತ್ತಿರುವುದು ಖಂಡನೀಯ’ ಎಂದು ರಾಷ್ಟ್ರೀಯ ಅಹಿಂದ ಸಂಘಟನೆ ತಿಳಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಕೆ.ಎಚ್. ಮೋಹನ್ಕುಮಾರ್, ‘ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬರಲು ಅಹಿಂದ ಸಮುದಾಯದ ನಿರ್ಣಾಯಕ ಪಾತ್ರ ಇದೆ’ ಎಂದು ತಿಳಿಸಿದರು.

‘ಸರ್ಕಾರ ರಚನೆಯಾದ ನಂತರ ಈ ಸಮುದಾಯಗಳ ನಾಯಕತ್ವವನ್ನು ಕಡೆಗಣಿಸಲಾಗಿದೆ. ಯಾವುದೇ ನೋಟಿಸ್ ನೀಡದೇ ಅಬ್ದುಲ್ ಜಬ್ಬಾರ್ ಹಾಗೂ ನಸೀರ್ ಅಹಮದ್ ಅವರ ವಿರುದ್ಧ ಕಾಂಗ್ರೆಸ್ ಕೈಗೊಂಡಿರುವ ಶಿಸ್ತು ಕ್ರಮ ಖಂಡನೀಯ. ಶಾಸಕ ಕೆ.ಎನ್. ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ಕೆಳಗಿಳಿಸಿರುವುದು ಸರಿಯಲ್ಲ. ಈಗ ಸಚಿವ ಜಮೀರ್ ಅಹಮದ್ ಖಾನ್ ಅವರನ್ನು ಗುರಿ ಮಾಡಲಾಗುತ್ತಿದೆ’ ಎಂದು ದೂರಿದರು.

‘ಅಹಿಂದ ನಾಯಕತ್ವವನ್ನು ದುರ್ಬಲಗೊಳಿಸುವ ಪ್ರಯತ್ನಗಳು ನಡೆಯುತ್ತಿದೆ ಕಾಂಗ್ರೆಸ್ ಹೈಕಮಾಂಡ್ ಮಧ್ಯಪ್ರವೇಶಿಸಿಸಮುದಾಯದ ನಾಯಕರಿಗೆ ನ್ಯಾಯ ಒದಗಿಸಬೇಕು. ಇಲ್ಲದಿದ್ದರೆ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.

ಸಂಘಟನೆ ಪ್ರಧಾನ ಕಾರ್ಯದರ್ಶಿ ಶಿವಣ್ಣ, ಬೆಂಗಳೂರು ನಗರ ಘಟಕದ ಅಧ್ಯಕ್ಷ ಬಿ. ಬಸವಯ್ಯ, ಮಲ್ಲೇಶ, ಸುಜಾತಾ, ರೇಷ್ಮಾ, ಕವಿತಾ, ಮಹಮ್ಮದ್ ಅಲಿ, ತಾಹಿರ ಪಾಷ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.