ಬೆಂಗಳೂರು: ‘ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ವ್ಯತ್ಯಾಸವೇನೂ ಇಲ್ಲ. ಎರಡೂ ಪಕ್ಷಗಳಿಂದ ಮುಸ್ಲಿಮರು ಅತಂತ್ರರಾಗಿದ್ದಾರೆ’ ಎಂದು ವಿಧಾನ ಪರಿಷತ್ನ ಜೆಡಿಎಸ್ ಸದಸ್ಯ ಬಿ.ಎಂ. ಫಾರೂಕ್ ಹೇಳಿದ್ದಾರೆ.

‘ಮುಸ್ಲಿಮರ ಮತಗಳಿಗಾಗಿ ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುತ್ತಿದೆ. ಆರ್ಎಸ್ಎಸ್ ಕಾರ್ಯಸೂಚಿಗೆ ಪೂರಕವಾಗಿ ಕಾಂಗ್ರೆಸ್ ಕೆಲಸ ಮಾಡುತ್ತಿದೆ. ಮುಸ್ಲಿಮರ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ವ್ಯತ್ಯಾಸಗಳಿಲ್ಲ. ಎರಡೂ ಪಕ್ಷಗಳು ಮುಸ್ಲಿಮರಿಗೆ ರಾಜಕೀಯವಾಗಿ ಮೋಸ ಮಾಡಿಕೊಂಡು ಬಂದಿವೆ’ ಎಂದು ಪತ್ರಿಕಾ ಹೇಳಿಕೆಯಲ್ಲಿ ದೂರಿದ್ದಾರೆ.

‘ಕಾಂಗ್ರೆಸ್ನಲ್ಲಿರುವ ಮುಸ್ಲಿಂ ನಾಯಕರು ಕೂಡ ಮುಸ್ಲಿಮರಿಗಾಗಿ ಯಾವ ಕೆಲಸವನ್ನೂ ಮಾಡಿಲ್ಲ. ರಾಜ್ಯಸಭೆ ಚುನಾವಣೆಯಲ್ಲಿ ನನಗೆ ಜೆಡಿಎಸ್ನಿಂದ ಅನ್ಯಾಯವಾಯಿತು ಎಂಬುದು ಅರ್ಥಹೀನ. ಈಗ ಆರೋಪ ಮಾಡುತ್ತಿರುವ ಶಾಸಕ ಜಮೀರ್ ಅಹಮ್ಮದ್ ಸೇರಿದಂತೆ ಕೆಲವರೇ ಆಗ ಮೋಸ ಮಾಡಿದವರು’ ಎಂದು ಆರೋಪಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.