ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಮಾನ ನಿಲ್ದಾಣಕ್ಕೆ ‘ಕಮಲ’ದ ವಿನ್ಯಾಸ: ಆಕ್ಷೇಪ

Last Updated 21 ಜೂನ್ 2021, 22:21 IST
ಅಕ್ಷರ ಗಾತ್ರ

ಬೆಂಗಳೂರು: ‘ಶಿವಮೊಗ್ಗ ವಿಮಾನ ನಿಲ್ದಾಣವನ್ನು ಕಮಲದ ವಿನ್ಯಾಸದಲ್ಲಿ ನಿರ್ಮಿಸಲಾಗುತ್ತಿದ್ದು, ರಾಜಕೀಯ ಪಕ್ಷದ ಚಿಹ್ನೆಯ ಪ್ರಚಾರಕ್ಕೆ ಸಾರ್ವಜನಿಕ ಹಣ ಮತ್ತು ಜಾಗ ಬಳಕೆ ಸರಿಯಲ್ಲ. ಈ ವಿನ್ಯಾಸವನ್ನು ಬದಲಿಸಬೇಕು’ ಎಂದುಕೇಂದ್ರ– ರಾಜ್ಯ ಸರ್ಕಾರವನ್ನು ಕಾಂಗ್ರೆಸ್ ಆಗ್ರಹಿಸಿದೆ.

ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಐಸಿಸಿ ವಕ್ತಾರ ಬೃಜೇಶ್‌ಕಾಳಪ್ಪ ಮತ್ತುಶಾಸಕ ಎನ್.ಎ. ಹ್ಯಾರಿಸ್,‘ಕಮಲ ಯಾವ ಪಕ್ಷದ ಚಿಹ್ನೆ ಎಂದು ಎಲ್ಲರಿಗೂ ಗೊತ್ತಿದೆ’ ಎಂದರು.

‘ರಾಜಕೀಯ ಪಕ್ಷದ ಚಿಹ್ನೆಯ ಪ್ರಚಾರಕ್ಕೆ ತೆರಿಗೆದಾರರ ಹಣ ಬಳಸುವಂತಿಲ್ಲ ಎಂದು ದೆಹಲಿ ಹೈಕೋರ್ಟ್ ಈ ಹಿಂದೆ ತೀರ್ಪು ನೀಡಿದೆ. ಹೀಗಾಗಿ, ಕಮಲದ ವಿನ್ಯಾಸದ ನಿರ್ಮಾಣವನ್ನು ಸರ್ಕಾರ ತಕ್ಷಣ ನಿಲ್ಲಿಸಬೇಕು’ ಎಂದು ಬೃಜೇಶ್‌ ಆಗ್ರಹಿಸಿದರು.

ಎನ್.ಎ. ಹ್ಯಾರೀಸ್ ಮಾತನಾಡಿ, ‘2005ರ ಕಾಯ್ದೆ ಅನ್ವಯ ವಿಪತ್ತು ನಿರ್ವಹಣಾ ನಿಧಿಯನ್ನು ವಿಪತ್ತು ನಿರ್ವಹಣೆಗೇ ಬಳಸಬೇಕು. ಕೇಂದ್ರ ಸರ್ಕಾರ ಕೋವಿಡ್‌ನಿಂದ ಮೃತಪಟ್ಟವರಿಗೆ ₹ 4ಲಕ್ಷ ಪರಿಹಾರ ನೀಡಲು ಸಾಧ್ಯವಿಲ್ಲ ಎಂದಿದೆ. ಈ ಸಮಯದಲ್ಲಿ ಅದನ್ನು ಬಳಸಿಕೊಳ್ಳದಿದ್ದರೆ ಯಾವಾಗ ಬಳಸಿಕೊಳ್ಳಲಾಗುತ್ತದೆ’ ಎಂದು ಪ್ರಶ್ನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT