ಸೋಮವಾರ, ಫೆಬ್ರವರಿ 17, 2020
30 °C

ಮಹಾಲಕ್ಷ್ಮಿ ಲೇಔಟ್‌: ಕಾಂಗ್ರೆಸ್ ಪ್ರಚಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂ.ಶಿವರಾಜು ಪರ ಶಾಸಕ
ರಾದ ರಾಮಲಿಂಗಾರೆಡ್ಡಿ, ಕೃಷ್ಣ ಬೈರೇಗೌಡ ಬುಧವಾರ ಪ್ರಚಾರ ನಡೆಸಿದರು.

ಕಮಲಾನಗರ ಮುಖ್ಯರಸ್ತೆಯಲ್ಲಿ ಮತಯಾಚನೆ ಆರಂಭಿಸಿದರು. ನಂತರ ಶಕ್ತಿ ಗಣಪತಿ ವಾರ್ಡ್‌ನ ಪ್ರಮುಖ ರಸ್ತೆಗಳಲ್ಲಿ ರೋಡ್ ಶೋ ಮೂಲಕ ಪ್ರಚಾರ ಮಾಡಿದರು. ‘ಆಯ್ಕೆಯಾಗಿದ್ದ ಪಕ್ಷಕ್ಕೆ ದ್ರೋಹ ಮಾಡಿ ಪಕ್ಷಾಂತರ ಮಾಡಿದ್ದಾರೆ. ಅನರ್ಹ ಶಾಸಕರಾಗಿ, ಮತ್ತೆ ಚುನಾವಣೆಗೆ ಸ್ಪರ್ಧಿಸಿರುವ 17 ಮಂದಿಗೂ ಮತದಾರರು ತಕ್ಕ ಪಾಠ ಕಲಿಸಬೇಕು. ಕ್ಷೇತ್ರದಲ್ಲಿ ಶಾಂತಿ ನೆಲೆಸಲು ಸಮರ್ಥ ಅಭ್ಯರ್ಥಿ ಆಯ್ಕೆ ಮಾಡಬೇಕು’ ಎಂದು ರಾಮಲಿಂಗಾರೆಡ್ಡಿ ಹೇಳಿದರು.

ಹಣ, ಅಧಿಕಾರಕ್ಕಾಗಿ ಪಕ್ಷಕ್ಕೆ ದ್ರೋಹ ಮಾಡಿರುವ ಅನರ್ಹ ಶಾಸಕರನ್ನು ಮನೆಗೆ ಕಳುಹಿಸಬೇಕು ಎಂದು ಕೃಷ್ಣ ಬೈರೇಗೌಡ ಮನವಿ ಮಾಡಿದರು. ‘ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಗರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಲಾಗಿದೆ. ಬೆಂಗಳೂರು ಅಭಿವೃದ್ಧಿಗೆ ₹10 ಸಾವಿರ ಕೋಟಿ ಅನುದಾನ ಕೊಡಲಾಗಿತ್ತು. ಅನ್ನಭಾಗ್ಯ, ಇಂದಿರಾ ಕ್ಯಾಂಟೀನ್‌ನಂತಹ ಜನಪರ ಯೋಜನೆಗಳು ಆರಂಭಗೊಂಡಿದ್ದವು’ ಎಂದು ಶಿವರಾಜು ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು