ಗುರುವಾರ , ಡಿಸೆಂಬರ್ 5, 2019
22 °C

‘ಕಾಂಗ್ರೆಸ್‌ ಲೂಟಿಕೋರ ಪಕ್ಷ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಸ್ವಾತಂತ್ರ್ಯಾನಂತರ ಕಾಂಗ್ರೆಸ್‌ ಪಕ್ಷ ದೇಶದ ಜನರ ಹಣ ಲೂಟಿ ಮಾಡಿದೆ’ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್‌.ರವಿಕುಮಾರ್‌ ಟೀಕಿಸಿದರು.

ಪ್ರಧಾನಿ ಮೋದಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ನಾಯಕರು ಸುಳ್ಳು ಪ್ರಚಾರ ಮಾಡುತ್ತಿರುವುದು ಖಂಡನೀಯ ಎಂದು ಅವರು ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.

ಆರ್‌ಸಿಇಪಿಗೆ ಪ್ರಧಾನಿ ಸಹಿ ಮಾಡಿದ್ದಾರೆ ಎಂಬುದಾಗಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸುಳ್ಳು ಹೇಳಿದ್ದಾರೆ. ವಾಸ್ತವದಲ್ಲಿ ಪ್ರಧಾನಿಯವರು ಸಹಮತ ಸೂಚಿಸದೇ ಒಪ್ಪಂದದಿಂದ ಹೊರಗೆ ಬಂದಿರುವುದು ಇಡೀ ಜಗತ್ತಿಗೆ ತಿಳಿದಿರುವ ಸಂಗತಿ ಎಂದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು