ಶನಿವಾರ, 22 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

‘ಯುವ ಮತ’ ಅಭಿಯಾನಕ್ಕೆ ಕಾಂಗ್ರೆಸ್‌ ಚಾಲನೆ

Last Updated 30 ಮಾರ್ಚ್ 2023, 19:26 IST
ಅಕ್ಷರ ಗಾತ್ರ

ಬೆಂಗಳೂರು: ಇದೇ ಮೊದಲ ಬಾರಿಗೆ ಮತ ಚಲಾಯಿಸಲಿರುವ 18ರಿಂದ 23 ವರ್ಷ ವಯಸ್ಸಿನ ಮತದಾರರನ್ನು ಉತ್ತೇಜಿಸುವುದಕ್ಕಾಗಿ ಕಾಂಗ್ರೆಸ್‌ ಪಕ್ಷವು ಹಮ್ಮಿಕೊಂಡಿರುವ ‘ಯುವ ಮತ’ ಅಭಿಯಾನಕ್ಕೆ ಗುರುವಾರ ಚಾಲನೆ ನೀಡಲಾಗಿದೆ.

ಎಐಸಿಸಿ ಕಾರ್ಯದರ್ಶಿ ಅಭಿಷೇಕ್‌ ದತ್‌ ಮತ್ತು ರಾಜ್ಯದಲ್ಲಿ ಅಭಿಯಾನದ ಉಸ್ತುವಾರಿಯಾಗಿ ನೇಮಕಗೊಂಡಿರುವ ರಾಷ್ಟ್ರೀಯ ಯುವ ಕಾಂಗ್ರೆಸ್‌ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಾ ರಾಮಯ್ಯ ಅವರು ‘ಯುವ ಮತ’ ಜಾಲತಾಣಕ್ಕೆ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅಭಿಷೇಕ್‌ ದತ್‌, ‘ಇದೇ ಮೊದಲ ಬಾರಿಗೆ ಮತ ಚಲಾಯಿಸುವ ಅವಕಾಶ ಪಡೆದಿರುವವರನ್ನು ಗುರುತಿಸಿ, ಮತದಾನ ಮಾಡುವಂತೆ ಅವರನ್ನು ಉತ್ತೇಜಿಸುವ ಕೆಲಸವನ್ನು ಕಾಂಗ್ರೆಸ್‌ ಮಾಡಲಿದೆ. ನಿರುದ್ಯೋಗ ನಿವಾರಣೆ ಮತ್ತು ಜೀವನ ನಿರ್ವಹಣೆಗೆ ಕಾಂಗ್ರೆಸ್‌ ಪಕ್ಷವು ನೀಡಿರುವ ಭರಸವೆಗಳ ಅನುಷ್ಠಾನದ ಕುರಿತು ಅವರಲ್ಲಿ ವಿಶ್ವಾಸ ಮೂಡಿಸುವ ಕೆಲಸವನ್ನೂ ಮಾಡಲಾಗುವುದು’ ಎಂದರು.

ರಕ್ಷಾ ರಾಮಯ್ಯ ಮಾತನಾಡಿ, ‘ರಾಜ್ಯದಾದ್ಯಂತ ಈ ಅಭಿಯಾನ ನಡೆಯಲಿದೆ. ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಯುವಜನರ ಅಭಿಪ್ರಾಯ ಸಂಗ್ರಹವನ್ನೂ ಮಾಡಲಾಗುವುದು’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT