ಬೆಂಗಳೂರು: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಸದಾಶಿವನಗರದಲ್ಲಿರುವ ನಟ ದಿವಂಗತ ಪುನೀತ್ ರಾಜ್‌ಕುಮಾರ್ ಅವರ ನಿವಾಸಕ್ಕೆ ಗುರುವಾರ ರಾತ್ರಿ ಭೇಟಿ ನೀಡಿ, ಪುನೀತ್ ಅವರ ಪತ್ನಿ ಅಶ್ವಿನಿ ಪುನೀತ್‌ರಾಜ್‌ಕುಮಾರ್ ಅವರಿಗೆ ಸಾಂತ್ವನ ಹೇಳಿದರು.

ತುಮಕೂರಿನ ಸಿದ್ಧಗಂಗಾ ಮಠಕ್ಕೆ ಗುರುವಾರ ಸಂಜೆ ಭೇಟಿ ನೀಡಿ, ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ದರ್ಶನ ಮಾಡಿದ ಬಳಿಕ ರಾಹುಲ್ ಗಾಂಧಿ ಅವರು ರಾತ್ರಿ ಬೆಂಗಳೂರಿಗೆ ಬಂದರು. ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಮ್ಮುಖದಲ್ಲಿ ಪುನೀತ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ರಾಹುಲ್ ಗಾಂಧಿ ಅವರು ಅಶ್ವಿನಿ, ರಾಘವೇಂದ್ರ ರಾಜ್‌ಕುಮಾರ್ ಅವರ ಜೊತೆ ಮಾತುಕತೆ ನಡೆಸಿದರು. ಪ್ರಚಾರ ಸಮಿತಿಯ ಅಧ್ಯಕ್ಷ ಎಂ.ಬಿ.ಪಾಟೀಲ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.