ಮಂಗಳವಾರ, ನವೆಂಬರ್ 24, 2020
19 °C
ಪಕ್ಷದ ಕಾರ್ಯಕರ್ತರಿಂದ ಪ್ರತಿಭಟನೆ: ಸರ್ಕಾರದ ವಿರುದ್ಧ ಆಕ್ರೋಶ

ಆಸ್ತಿ ತೆರಿಗೆ, ವಿದ್ಯುತ್ ದರ ಏರಿಕೆಗೆ ಕಾಂಗ್ರೆಸ್ ವಿರೋಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಆಸ್ತಿ ತೆರಿಗೆ ಹಾಗೂ ವಿದ್ಯುತ್ ದರ ಏರಿಕೆ ಮಾಡಿರುವ ಸರ್ಕಾರ, ಕೊರೊನಾ ಸೋಂಕು ಹರಡುತ್ತಿರುವ ಸಂದರ್ಭದಲ್ಲಿ ಜನಸಾಮಾನ್ಯರನ್ನು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿಸುತ್ತಿದೆ’ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.

ಆನಂದರಾವ್ ವೃತ್ತದಲ್ಲಿರುವ ಗಾಂಧಿ ಪ್ರತಿಮೆ ಎದುರು ಸೇರಿದ್ದ ಪ್ರತಿಭಟನಕಾರರು, ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದರು.

‘ಇಡೀ ಜಗತ್ತು ಕೊರೊನಾ ಸಂಕಷ್ಟಕ್ಕೆ ಸಿಲುಕಿ ನಲುಗುತ್ತಿದೆ. ದೇಶದಾದ್ಯಂತ ಲಕ್ಷಾಂತರ ಜನ ಕೆಲಸ ಕಳೆದುಕೊಂಡಿದ್ದಾರೆ. ಜನರ ಬದುಕು ಶೋಚನೀಯವಾಗಿದೆ.
ಇಂಥ ಸಂದರ್ಭದಲ್ಲೇ ಆಸ್ತಿ ತೆರಿಗೆ ಹಾಗೂ ವಿದ್ಯುತ್‌ ದರವನ್ನು ಏಕಾಏಕಿ ಏರಿಕೆ ಮಾಡಲಾಗಿದೆ. ಸರ್ಕಾರದ ಈ ಕ್ರಮ ಜನವಿರೋಧಿಯಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಕೇವಲ ಸಚಿವ ಸಂಪುಟ ಪುನರ್‌ ರಚನೆಯಲ್ಲಿ ಮಗ್ನವಾಗಿರುವ ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ, ಜನಸಾಮಾನ್ಯರ ಕಷ್ಟವನ್ನು ಆಲಿಸುತ್ತಿಲ್ಲ. ಇನ್ನಾದರೂ ಅವರು ಎಚ್ಚೆತ್ತುಕೊಳ್ಳಬೇಕು. ಆಸ್ತಿ ತೆರಿಗೆ ಹಾಗೂ ವಿದ್ಯುತ್ ದರ ಏರಿಕೆಯನ್ನು
ಆದೇಶವನ್ನು ಹಿಂಪಡೆಯಬೇಕು. ಇಲ್ಲದಿದ್ದರೆ, ನಮ್ಮ ಹೋರಾಟ ನಿರಂತರವಾಗಿ ನಡೆಯಲಿದೆ’ ಎಂದೂ ಪ್ರತಿಭಟನಕಾರರು ಎಚ್ಚರಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು