ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಶವಂತಪುರದಲ್ಲಿ ಕಾಂಗ್ರೆಸ್ ಸಮಾವೇಶ

Last Updated 19 ಸೆಪ್ಟೆಂಬರ್ 2019, 20:44 IST
ಅಕ್ಷರ ಗಾತ್ರ

ಬೆಂಗಳೂರು: ಅನರ್ಹ ಶಾಸಕರ ಕ್ಷೇತ್ರಗಳ ಉಪಚುನಾವಣೆಗೆ ಸಿದ್ಧತೆ ಆರಂಭಿಸಿರುವ ಕಾಂಗ್ರೆಸ್, ಸರಣಿ ಸಭೆಗಳನ್ನು ನಡೆಸುವ ಮೂಲಕ ಪಕ್ಷದ ಮುಖಂಡರು, ಕಾರ್ಯಕರ್ತರನ್ನು ಸಜ್ಜುಗೊಳಿಸುವ ಕೆಲಸದಲ್ಲಿ ನಿರತವಾಗಿದೆ.

ಈಗಾಗಲೇ ಏಳೆಂಟು ಕ್ಷೇತ್ರಗಳ ಮುಖಂಡರ ಜತೆಗೆ ಚರ್ಚಿಸಿದ್ದು, ಗುರುವಾರ ಯಶವಂತಪುರ ಕ್ಷೇತ್ರದ ಪ್ರಮುಖರೊಂದಿಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸಭೆ ನಡೆಸಿದರು. ಕ್ಷೇತ್ರವನ್ನು ಮರಳಿ ಪಕ್ಷದ ತೆಕ್ಕೆಗೆ ತೆಗೆದುಕೊಳ್ಳುವ ಬಗ್ಗೆ ಚರ್ಚಿಸಿ, ಮುಖಂಡರ ಸಲಹೆ ಪಡೆದುಕೊಂಡರು.

ಯಶವಂತಪುರದಲ್ಲಿ ಅಕ್ಟೋಬರ್‌ನಲ್ಲಿ ಬೃಹತ್ ಸಮಾವೇಶ ಮಾಡುವ ಮೂಲಕ ಚುನಾವಣೆಗೆ ಸಜ್ಜಾಗಲು ಸಭೆಯಲ್ಲಿ ನಿರ್ಧರಿಸಲಾಗಿದೆ.

ಬೆನ್ನಿಗೆ ಚೂರಿಹಾಕಿ ಹೋದವರಿಗೆ ತಕ್ಕ ಪಾಠ ಕಲಿಸಬೇಕು. ಯಾವುದೇ ಕಾರಣಕ್ಕೂ ಪಕ್ಷ ತೊರೆದವರು ಗೆಲ್ಲಬಾರದು. ಮತ್ತೊಮ್ಮೆ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಬೇಕು ಎಂದು ದಿನೇಶ್ ಸಲಹೆ ಮಾಡಿದರು ಎನ್ನಲಾಗಿದೆ.

‘ಕ್ಷೇತ್ರದಲ್ಲಿ ನಾನಿದ್ದೇನೆ. ಎಲ್ಲವನ್ನೂ ನೋಡಿಕೊಳ್ಳುತ್ತೇನೆ. ಯಾರೂ ಭಯ ಪಡುವ ಅಗತ್ಯವಿಲ್ಲ. ಸಮರ್ಥ ಅಭ್ಯರ್ಥಿಯನ್ನು ನಿಲ್ಲಿಸಿ ಗೆಲ್ಲುವಂತೆ ಮಾಡಬೇಕು. ಮತ್ತೊಮ್ಮೆ ಕ್ಷೇತ್ರವನ್ನು ಉಳಿಸಿಕೊಳ್ಳಲು ಎಲ್ಲರೂ ಸಹಕಾರ ನೀಡಬೇಕು’ ಎಂದು ಯಶವಂತಪುರ ಕ್ಷೇತ್ರದ ವೀಕ್ಷಕ ಎಂ.ಕೃಷ್ಣಪ್ಪ ಹೇಳಿದರು.

ಶಾಸಕ ಕೃಷ್ಣ ಭೈರೇಗೌಡ, ಮುಖಂಡರಾದ ಟಿ.ಬಿ.ಜಯಚಂದ್ರ, ಎಂ.ನಾರಾಯಣಸ್ವಾಮಿ, ರಾಜಕುಮಾರ್ ಇತರ ಮುಖಂಡರು ಭಾಗವಹಿಸಿದ್ದರು.

ವೀಕ್ಷಕರ ನೇಮಕ: ಕೆಪಿಸಿಸಿ 34 ವೀಕ್ಷಕರನ್ನು ನೇಮಕ ಮಾಡಿದ್ದು, ಪ್ರಾದೇಶಿಕ, ಜಿಲ್ಲಾವಾರು ಪ್ರಾತಿನಿಧ್ಯ ನೀಡಲಾಗಿದೆ. ಬಿ.ಎಲ್.ಶಂಕರ್, ವಿ.ಆರ್.ಸುದರ್ಶನ್, ಡಾ.ಎಲ್.ಹನುಮಂತಯ್ಯ, ಬಸವರಾಜ ರಾಯರಡ್ಡಿ, ಯು.ಟಿ.ಖಾದರ್, ಕೃಷ್ಣ ಭೈರೇಗೌಡ ಸೇರಿದಂತೆ 34 ನಾಯಕರಿಗೆ ವೀಕ್ಷಕರ ಜವಾಬ್ದಾರಿ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT