ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭ್ರಮೆಯಲ್ಲಿದ್ದ ಕಾಂಗ್ರೆಸ್‌ ಪಕ್ಷಕ್ಕೆ ಮರ್ಮಾಘಾತ: ಬಿ.ವೈ. ವಿಜಯೇಂದ್ರ

Published 3 ಫೆಬ್ರುವರಿ 2024, 16:07 IST
Last Updated 3 ಫೆಬ್ರುವರಿ 2024, 16:07 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಜ್ಯ ವಿಧಾನಸಭಾ ಚುನಾವಣೆ ಬಳಿಕ ಭ್ರಮೆಯಲ್ಲಿ ತೇಲುತ್ತಿದ್ದ ಕಾಂಗ್ರೆಸ್‌ ಪಕ್ಷಕ್ಕೆ, ಐದು ರಾಜ್ಯಗಳ ಚುನಾವಣಾ ಫಲಿತಾಂಶದ ಬಳಿಕ ಮರ್ಮಾಘಾತವಾಗಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಶನಿವಾರ ಹೇಳಿದರು.

ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾ ಘಟಕದ ನೂತನ ಅಧ್ಯಕ್ಷ, ಶಾಸಕ ಸಿ.ಕೆ. ರಾಮಮೂರ್ತಿ ಅವರ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದ ಅವರು, ‘ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಲೋಕಸಭಾ ಚುನಾವಣೆಯನ್ನೂ ಗೆಲ್ಲಬಹುದು ಎಂಬ ಭ್ರಮೆ ಕಾಂಗ್ರೆಸ್‌ ನಾಯಕರನ್ನು ಆವರಿಸಿತ್ತು. ಐದು ರಾಜ್ಯಗಳ ಚುನಾವಣಾ ಫಲಿತಾಂಶವು ಅವರನ್ನು ಕಂಗೆಡಿಸಿದೆ’ ಎಂದರು.

‘ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿ ಆಗಬೇಕು ಎಂಬುದು ದೇಶದ ಜನರ ಬಯಕೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರೂ ಅದನ್ನು ಹೇಳಿದ್ದಾರೆ. ಇದಕ್ಕಾಗಿ ಖರ್ಗೆಯವರನ್ನು ಅಭಿನಂದಿಸುತ್ತೇನೆ’ ಎಂದು ಹೇಳಿದರು.

‘ಕಾಂಗ್ರೆಸ್‌ ಪಕ್ಷವು ದೇಶದ ಅಲ್ಲಲ್ಲಿ ಅವಶೇಷಗಳ ರೂಪದಲ್ಲಿ ಉಳಿದುಕೊಂಡಿದೆ. ಬಿಜೆಪಿಯು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಭಾರಿ ಬಹುಮತದೊಂದಿಗೆ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ’ ಎಂದರು.

ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ, ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಮತ್ತು ಸಂಸದ ತೇಜಸ್ವಿಸೂರ್ಯ, ಶಾಸಕರಾದ ಸತೀಶ್ ರೆಡ್ಡಿ, ಎಂ. ಕೃಷ್ಣಪ್ಪ, ಎಲ್.ಎ. ರವಿಸುಬ್ರಹ್ಮಣ್ಯ, ಉದಯ ಗರುಡಾಚಾರ್, ವಿಧಾನಪರಿಷತ್ ಸದಸ್ಯ ಗೋಪಿನಾಥ್ ರೆಡ್ಡಿ ಉಪಸ್ಥಿತರಿದ್ದರು.

ಬಿಜೆಪಿಯ ಬೆಂಗಳೂರು ಉತ್ತರ ಮತ್ತು ಬೆಂಗಳೂರು ಕೇಂದ್ರ ಜಿಲ್ಲಾ ಘಟಕಗಳ ಅಧ್ಯಕ್ಷರ ಪದಗ್ರಹಣ ಹಾಗೂ ಕಾರ್ಯಕಾರಿ ಸಮಿತಿ ಸಭೆಗಳೂ ಶನಿವಾರ ಪ್ರತ್ಯೇಕವಾಗಿ ನಡೆದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT