ಗುರುವಾರ , ಅಕ್ಟೋಬರ್ 29, 2020
28 °C

ಹಾಥರಸ್ ವಿಚಾರದಲ್ಲಿ ಕಾಂಗ್ರೆಸ್‌ ರಾಜಕಾರಣ: ಸದಾನಂದಗೌಡ ಆರೋಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಹಾಥರಸ್‌ ಘಟನೆಯ ವಿಷಯದಲ್ಲಿ ಕಾಂಗ್ರೆಸ್‌ ರಾಜಕಾರಣ ಮಾಡುತ್ತಿದೆ’ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹೇಳಿದ್ದಾರೆ.

‘ಕಾಂಗ್ರೆಸ್‌ ಅಧಿಕಾರಕ್ಕಾಗಿ ಹಪಹಪಿಸುತ್ತಿದೆ. ಆ ಪಕ್ಷಕ್ಕೆ ಅಸ್ತಿತ್ವದ ಪ್ರಶ್ನೆ ಕಾಡುತ್ತಿದೆ. ಹೀಗಾಗಿ ಪ್ರತಿಯೊಂದಕ್ಕೂ ರಾಜಕೀಯ ಬೆರೆಸುತ್ತಿದೆ. ಘಟನೆಯ ಪೂರ್ವಾಪರ ತಿಳಿದುಕೊಳ್ಳದೇ ರಾಜಕಾರಣಕ್ಕೆ ಬಳಸಿಕೊಳ್ಳುವುದು ಸರಿಯಲ್ಲ. ಅಲ್ಲಿನ ಘಟನೆಯ ಪೂರ್ಣ ಮಾಹಿತಿ ಇಲ್ಲದೆ ಮಾತನಾಡುವುದಿಲ್ಲ. ಮೃತ ಯುವತಿಯ ಕುಟುಂಬಕ್ಕೆ ಗೊತ್ತಿಲ್ಲದೇ ಏನಾದರೂ ಆಗಿದ್ದರೆ, ಆ ಬಗ್ಗೆ ಅಲ್ಲಿನ ಸರ್ಕಾರ ಕ್ರಮ ತೆಗೆದುಕೊಳ್ಳುತ್ತದೆ ಎಂದು ತಿಳಿಸಿದರು.

‘ಸಮುದ್ರ ಮತ್ತು ಹೊಳೆಗೆ ಹೋದರೂ ಕಾಂಗ್ರೆಸ್‌ ಬಲೆಗೆ ಮೀನುಗಳು ಬೀಳುತ್ತಿಲ್ಲ. ಆದ್ದರಿಂದ ಪ್ರತಿಯೊಂದು ವಿಷಯದಲ್ಲೂ ರಾಜಕೀಯ ಬೆರೆಸುತ್ತಿದೆ’ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು