ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೈಲ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ; ನಲಪಾಡ್‌ ವಶಕ್ಕೆ

Last Updated 5 ಜೂನ್ 2021, 16:24 IST
ಅಕ್ಷರ ಗಾತ್ರ

ಬೆಂಗಳೂರು: ಲಾಕ್‌ಡೌನ್ ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ ಆರೋಪದಡಿ ಯುವ ಕಾಂಗ್ರೆಸ್ ಮುಖಂಡ ಮೊಹಮ್ಮದ್ ನಲಪಾಡ್ ಹಾಗೂ ಇತರರನ್ನು ಅಶೋಕನಗರ ಠಾಣೆ ಪೊಲೀಸರು ಶನಿವಾರ ವಶಕ್ಕೆ ಪಡೆದು, ಪ್ರಕರಣ ದಾಖಲಿಸಿಕೊಂಡು ಬಿಟ್ಟು ಕಳುಹಿಸಿದರು.

ತೈಲ ಬೆಲೆ ಏರಿಕೆ ಖಂಡಿಸಿ ಯುವ ಕಾಂಗ್ರೆಸ್ ಘಟಕ ರಾಜ್ಯದಾದ್ಯಂತ ಪ್ರತಿಭಟನೆಗೆ ಕರೆ ನೀಡಿತ್ತು. ನಲಪಾಡ್ ಹಾಗೂ ಇತರರು, ಪಿಪಿಇ ಕಿಟ್ ಧರಿಸಿ ಕೈಯಲ್ಲಿ ಬ್ಯಾಟ್ ಹಿಡಿದು ಅಶೋಕನಗರ ಠಾಣೆ ವ್ಯಾಪ್ತಿಯ ಬಂಕ್ ಬಳಿ ಪ್ರತಿಭಟನೆ ನಡೆಸಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದರು.

ಸ್ಥಳಕ್ಕೆ ಬಂದ ಪೊಲೀಸರು, ‘ನಗರದಲ್ಲಿ ಲಾಕ್‌ಡೌನ್‌ ಜಾರಿಯಲ್ಲಿದೆ. ಯಾವುದೇ ಪ್ರತಿಭಟನೆಗೆ ಅವಕಾಶವಿಲ್ಲ. ಹೊರಟು ಹೋಗಿ’ ಎಂದಿದ್ದರು. ಅದಕ್ಕೆ ಪ್ರತಿಭಟನಕಾರರು ಒಪ್ಪಲಿಲ್ಲ. ಎಲ್ಲರನ್ನೂ ಪೊಲೀಸರು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದರು.

‘ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆಯಡಿ ಪ್ರತಿಭಟನಕಾರರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ದಂಡ ಕಟ್ಟಿಸಿಕೊಂಡು ಎಲ್ಲರನ್ನೂ ಬಿಟ್ಟು ಕಳುಹಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT