ಮಂಗಳವಾರ, ಸೆಪ್ಟೆಂಬರ್ 22, 2020
22 °C

‘ಸೇಲಾದ ಶಾಸಕರು’: ಕಾಂಗ್ರೆಸ್‌ನಿಂದ ಹೋರಾಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಅನರ್ಹಗೊಂಡಿರುವ 17 ಶಾಸಕರ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಪ್ರತಿಭಟನೆಗೆ ಇಳಿಯಲು ಸಜ್ಜಾಗಿದ್ದು, ‘ಸೇಲಾದ ಶಾಸಕರು’ ಘೋಷಣೆಯೊಂದಿಗೆ ಹೋರಾಟ ನಡೆಸಲಿದೆ.

ಇದೇ 8ರಂದು ನಗರದ ಮೂರು ಕ್ಷೇತ್ರಗಳಲ್ಲಿ ಯಾವುದಾದರೊಂದು ಕ್ಷೇತ್ರದಲ್ಲಿ ಕಾಂಗ್ರೆಸ್ ನೇತೃತ್ವದಲ್ಲಿ ಧರಣಿ ನಡೆಯಲಿದ್ದು, ರಾಜ್ಯಮಟ್ಟದ ಬಹುತೇಕ ನಾಯಕರು ಭಾಗವಹಿಸಲಿದ್ದಾರೆ. ನಂತರ ಎಲ್ಲ ಕ್ಷೇತ್ರಗಳಲ್ಲೂ ಪ್ರತಿಭಟನೆ ಮುಂದುವರಿಯಲಿದ್ದು, ಇದರಲ್ಲಿ ಪ್ರಮುಖರು ಕಡ್ಡಾಯವಾಗಿ ಪಾಲ್ಗೊಳ್ಳಲಿದ್ದಾರೆ. ರಾಜ್ಯಮಟ್ಟದ ನಾಯಕರು ಹೋರಾಟದ ತೀವ್ರತೆ ಹೆಚ್ಚಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಈಗಾಗಲೇ ಉಪಚುನಾವಣೆ ಎದುರಿಸಲು ಸಿದ್ಧತೆ ಆರಂಭಿಸಿದ್ದು, 17 ಕ್ಷೇತ್ರಗಳಿಗೂ ವೀಕ್ಷಕರನ್ನು ನೇಮಕ ಮಾಡುವ ಮೂಲಕ ಪಕ್ಷ ಸಂಘಟಿಸುವ ಕೆಲಸದಲ್ಲಿ ಮುಖಂಡರು ತೊಡಗಿಸಿಕೊಂಡಿದ್ದಾರೆ. ಅನರ್ಹರು ಮತ್ತೊಮ್ಮೆ ಸ್ಪರ್ಧಿಸಿದರೆ ಅಥವಾ ಅವರ ಕುಟುಂಬದವರು, ಸಂಬಂಧಿಕರು ಸ್ಪರ್ಧಿಸಿದರೂ ಸೋಲಿಸಲು ಪಣತೊಟ್ಟಿದ್ದಾರೆ. ರಾಜಕೀಯವಾಗಿ ತೀವ್ರ ಹಿನ್ನಡೆ ಉಂಟಾಗುವಂತೆ ಮಾಡಲು ಕಾರ್ಯತಂತ್ರ ಹೆಣೆದಿದ್ದಾರೆ.

‘ಕಾಂಗ್ರೆಸ್ ಬಿಟ್ಟು ತಪ್ಪು ಮಾಡಿದೆವು ಎಂಬ ಕೊರಗು ಕಾಡಬೇಕು. ಪಕ್ಷ ಬಿಟ್ಟು ಹೋದವರಿಗೆ ಹಾಗೂ ಪಕ್ಷಾಂತರಿಗಳಿಗೆ ಇದೊಂದು ರೀತಿಯ ಪಾಠ ಆಗಬೇಕು. ಆ ಕಾರಣಕ್ಕೆ ಉಪಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಈ ಬಾರಿ ಒಂದು ಸಂದೇಶವಂತೂ ರವಾನೆಯಾಗಬೇಕಿದೆ’ ಎಂದು ಮುಖಂಡರೊಬ್ಬರು ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು