ಬುಧವಾರ, ನವೆಂಬರ್ 13, 2019
23 °C
ಹಿಂದಿ ಹೇರಿಕೆ ಆರೋಪಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

‘ಶಾ, ರಾಜ್ಯದ ಜನರ ಕ್ಷಮೆ ಕೇಳಬೇಕು’

Published:
Updated:
Prajavani

ಬೆಂಗಳೂರು: ‘ನಾವು ಹಿಂದಿ ವಿರೋಧಿಗಳಲ್ಲ. ಆದರೆ, ಹಿಂದಿ ಹೇರಿಕೆಯನ್ನು ವಿರೋಧಿಸುತ್ತೇವೆ. ಒಂದು ಭಾಷೆ, ಒಂದು ದೇಶವೆಂದು ಭಾಷೆ ವಿಷಯದಲ್ಲಿ ಮಾತನಾಡಿರುವ ಅಮಿತ್‌ ಶಾ, ರಾಜ್ಯದ ಜನರ ಕ್ಷಮೆ ಕೇಳುವಂತೆ ಬಿಜೆಪಿ ನಾಯಕರು ಮಾಡಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್‌ ಸವಾಲು ಹಾಕಿದರು.

‘ಹಿಂದಿ ದಿವಸ್’ ನೆಪದಲ್ಲಿ ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರ ಕನ್ನಡಿಗರ ಮೇಲೆ ಹಿಂದಿ ಹೇರಿಕೆ ಮಾಡುತ್ತಿದೆ ಎಂದು ಆರೋಪಿಸಿ ಮತ್ತು ಗೃಹ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಮೌರ್ಯ ವೃತ್ತದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಕೇಂದ್ರ ಸರ್ಕಾರ, ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು, ಶಾ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಕ್ರಿಯಿಸಿ (+)