ಸೋಮವಾರ, ಆಗಸ್ಟ್ 10, 2020
23 °C

ಯೋಗೇಶ್ವರ್ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಬಗ್ಗೆ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಅವರು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ’ ಎಂದು ಆರೋಪಿಸಿ ಬೆಂಗಳೂರು ನಗರ ಕಾಂಗ್ರೆಸ್ ಪ್ರಚಾರ ಸಮಿತಿ ಸದಸ್ಯರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಸಿ.ಪಿ.ಯೋಗೇಶ್ವರ್ ಅವರ ಭಾವಚಿತ್ರ ಅಂಟಿಸಿದ್ದ ಬಕೆಟ್‌ ಹಿಡಿದುಕೊಂಡು ಅವರ ಮುಖವಾಡ ಧರಿಸಿದ್ದ ಸದಸ್ಯರೊಬ್ಬರು, ‘ಸಮಯ ಸಾಧಕ ಯೋಗೇಶ್ವರ’ ಎಂದು ಘೋಷಣೆ ಕೂಗಿದರು.

‘ಮೆಗಾಸಿಟಿ ಹಗರಣದ ರೂವಾರಿ ಆಗಿರುವ ಯೋಗೇಶ್ವರ್‌ ಅವರಿಗೆ ವಿಧಾನ ಪರಿಷತ್ ಸ್ಥಾನ ನೀಡಿರುವ ಬಿಜೆಪಿ, ಭ್ರಷ್ಟಾಚಾರದಲ್ಲಿ ನಿರತವಾಗಿದೆ. ಭ್ರಷ್ಟರನ್ನೇ ಸೆಳೆಯುವ ತಂತ್ರದಲ್ಲಿ ಬಿಜೆಪಿ ನಾಯಕರು ನಿರತರಾಗಿದ್ದಾರೆ’ ಎಂದು ಪ್ರತಿಭಟನಕಾರರು ದೂರಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು