ಬೆಂಗಳೂರು: ‘ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಇಳಿಕೆಯಾಗಿದೆ. ಬೆಲೆ ಇಳಿಕೆಯ ಲಾಭವನ್ನು ಕೇಂದ್ರ ಸರ್ಕಾರವು ಜನ ಸಾಮಾನ್ಯರಿಗೆ ವರ್ಗಾಯಿಸಬೇಕಿತ್ತು. ಆದರೆ ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆ ಮಾಡಿ, ಜನರನ್ನು ವಂಚಿಸಿದೆ’ ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್.ಮಂಜುನಾಥ್ ಗೌಡ ಆರೋಪಿಸಿದರು.

ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಯುವ ಕಾಂಗ್ರೆಸ್ ಆಯೋಜಿಸಿದ್ದ ಪ್ರತಿಭಟನಾ ಮೆರವಣಿಗೆಯಲ್ಲಿ ಮಾತನಾಡಿದ ಅವರು, ‘ಕಚ್ಚಾತೈಲದ ಬೆಲೆ ಕುಸಿತದ ಕಾರಣದಿಂದ ದೇಶದಲ್ಲೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್ಗೆ ₹2ರಷ್ಟು ಇಳಿಕೆಯಾಗಿದೆ. ಈ ಬೆಲೆ ಕುಸಿತದ ಲಾಭವನ್ನು ಜನಸಾಮಾನ್ಯರಿಗೆ ವರ್ಗಾಯಿಸಲು ಮೋದಿ ಅವರಿಗೆ ಇಷ್ಟವಿಲ್ಲ. ಹೀಗಾಗಿ ಎರಡೂ ಇಂಧನಗಳ ಮೇಲೆ ₹2ರಷ್ಟು ಅಬಕಾರಿ ಸುಂಕವನ್ನು ಹೆಚ್ಚಿಸಿದ್ದಾರೆ’ ಎಂದರು.

‘ಮೋದಿ ಅವರ ತಮ್ಮ ಸರ್ಕಾರದ ಆದಾಯ ಸಂಗ್ರಹಕ್ಕಷ್ಟೇ ಆದ್ಯತೆ ನೀಡುತ್ತಾರೆ. ಹಲವು ವರ್ಷಗಳಿಂದ ಹೀಗೇ ಮಾಡುತ್ತಿದ್ದು, ಕಚ್ಚಾತೈಲ ಬೆಲೆ ಇಳಿಕೆಯ ಲಾಭವು ಜನ ಸಾಮಾನ್ಯರಿಗೆ ಸಿಗದಂತೆ ಮಾಡಿದ್ದಾರೆ. ಅವರ ವಿಫಲ ಆರ್ಥಿಕ ನೀತಿಗಳ ಕಾರಣದಿಂದ ದೇಶದ ಹಣಕಾಸು ಸ್ಥಿತಿ ಹದಗೆಟ್ಟಿದೆ. ನಿರುದ್ಯೋಗ ಹೆಚ್ಚಾಗಿದೆ. ಎಲ್ಲ ಬೆಲೆಏರಿಕೆಗಳ ನಡುವೆ ಈಗ ಎಲ್ಪಿಜಿ ಸಿಲಿಂಡರ್ ಬೆಲೆ ಸಹ ಹೆಚ್ಚಳ ಮಾಡಿ, ಬಡವರ ಹೊಟ್ಟೆಯ ಮೇಲೆ ಹೊಡೆಯುತ್ತಿದೆ’ ಎಂದರು.

ಇದಕ್ಕೂ ಮುನ್ನ ಯುವ ಕಾಂಗ್ರೆಸ್ ಕಾರ್ಯಕರ್ತರು ಎತ್ತಿನಗಾಡಿ ಏರಿ, ಎಲ್ಪಿಜಿ ಖಾಲಿ ಸಿಲಿಂಡರ್ ಹೊತ್ತು ಪ್ರತಿಭಟನಾ ಮೆರವಣಿಗೆ ನಡೆಸಿದರು. ‘ಬೆಲೆ ಏರಿಕೆ ನಿಲ್ಲಿಸಿ, ಜನರ ಬದುಕು ಉಳಿಸಿ’ ಎಂದು ಆಗ್ರಹಿಸಿದರು.

ಪಕ್ಷದ ಕಚೇರಿ ಬಳಿಯೂ ಪ್ರತಿಭಟನೆ: ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಸೌಮ್ಯಾರೆಡ್ಡಿ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಮಹಿಳಾ ಕಾಂಗ್ರೆಸ್ ಸದಸ್ಯರು ನಗರದ ಕೆಪಿಸಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರದ ವಿರುದ್ಧ ಫಲಕಗಳನ್ನು ಪ್ರದರ್ಶಿಸಿ, ಬೆಲೆ ಏರಿಕೆಯನ್ನು ಖಂಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.