ಶನಿವಾರ, ಆಗಸ್ಟ್ 13, 2022
27 °C

ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಹಾಗೂ ಜನರ ದಿನಬಳಕೆ ವಸ್ತುಗಳ ದರ ಏರಿಕೆ ಖಂಡಿಸಿ ರಾಜಾಜಿನಗರ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಸಮಿತಿ ಸದಸ್ಯರು ಪ್ರತಿಭಟನೆ ನಡೆಸಿದರು.

ಶ್ರೀರಾಮಮಂದಿನ ಆಟದ ಮೈದಾನದಿಂದ ರಾಜಾಜಿನಗರದ ಆರ್.ಟಿ.ಒ.ಸಂಕೀರ್ಣದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ತಹಶೀಲ್ದಾರ್‌ ಅವರಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ, ‘ಕೇಂದ್ರ ಸರ್ಕಾರ ದಿನೇ ದಿನೇ ‌ದರ ಏರಿಸುವ ಮೂಲಕ ಬಡವರು ಹಾಗೂ ಮಧ್ಯಮ ವರ್ಗದ ಜನರನ್ನು ಸಂಕಷ್ಟಕ್ಕೆ ಸಿಲುಕಿಸಿದೆ’ ಎಂದು ದೂರಿದರು.

ಮಾಜಿ ಮೇಯರ್ ಜಿ.ಪದ್ಮಾವತಿ, ‘ಈಗ ತೈಲದರ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಸಿರುವುದರಿಂದ ಹಲವಾರು ಸಮಸ್ಯೆಗಳು ಉದ್ಭವಿಸಲಿವೆ. ಕೊರೊನಾ ಹೊಡೆತದಿಂದ ಅನೇಕರು ಉದ್ಯೋಗ ಕಳೆದುಕೊಂಡು ದಿಕ್ಕು ತೋಚದೆ ಕೂತಿದ್ದಾರೆ. ದರ ಏರಿಕೆಯು ಜನರನ್ನು ಮಾನಸಿಕ ಒತ್ತಡಕ್ಕೆ ತಳ್ಳಲಿದೆ’ ಎಂದು ಕಳವಳ ವ್ಯಕ್ತಪಡಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು