ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂಧನ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ ಇಂದು

Last Updated 28 ಜೂನ್ 2020, 21:32 IST
ಅಕ್ಷರ ಗಾತ್ರ

ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ವಿರೋಧಿಸಿ ರಾಜ್ಯದಾದ್ಯಂತ ಸೋಮವಾರ (ಜೂನ್‌ 29) ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ‘ಸೈಕಲ್ ಚಳವಳಿ’ ಹಮ್ಮಿಕೊಂಡಿದೆ.

ಪ್ರತಿಭಟನೆ ಅಂಗವಾಗಿ ಕೆಪಿಸಿಸಿ ನಿಯೋಜಿತ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಬೆಳಿಗ್ಗೆ 9.30 ಕ್ಕೆ ತಮ್ಮ ಮನೆಗಳಿಂದ ಕೆಪಿಸಿಸಿ ಕಚೇರಿಗೆ ಸೈಕಲ್‌ನಲ್ಲಿ ತೆರಳಲು ನಿರ್ಧರಿಸಿದ್ದಾರೆ.

ಬಳಿಕ ಆದಾಯ ತೆರಿಗೆ ಕಚೇರಿ ಎದುರು ನಡೆಯಲಿರುವ ಪ್ರತಿಭಟನೆಯಲ್ಲಿ ಪಕ್ಷದ ನಾಯಕರು ಭಾಗವಹಿಸಲಿದ್ದಾರೆ. ಎಲ್ಲ ಜಿಲ್ಲಾ ಕೇಂದ್ರಗಳಲ್ಲೂ ಏಕಕಾಲಕ್ಕೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ ಪ್ರಕಟಣೆ ತಿಳಿಸಿದೆ.

ಕೊರೊನಾ ನಿಯಂತ್ರಣದಲ್ಲಿ ಕೇಂದ್ರ, ರಾಜ್ಯ ಸರ್ಕಾರದ ವೈಫಲ್ಯ, ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಹಾಗೂ ಎಪಿಎಂಸಿ ತಿದ್ದುಪಡಿ ಕಾಯ್ದೆ ವಿರೋಧಿಸಿಯೂ ಪ್ರತಿಭಟನೆ ಹಮ್ಮಿಕೊಳ್ಳಲು ಕಾಂಗ್ರೆಸ್‌ ನಿರ್ಧರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT