ಬುಧವಾರ, ಜನವರಿ 29, 2020
30 °C

ಜಿಎಸ್‌ಟಿ ಬಾಕಿ: ಕೇಂದ್ರದ ಮೇಲೆ ಒತ್ತಡ ಹೇರಲು ಕಾಂಗ್ರೆಸ್ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸರಕು ಮತ್ತು ಸೇವಾ ತೆರಿಗೆಯ (ಜಿಎಸ್‌ಟಿ) ಪರಿಹಾರ ರೂಪದಲ್ಲಿ ಬರಬೇಕಿರುವ ಬಾಕಿ ಮೊತ್ತವನ್ನು ಪಡೆಯಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೇಂದ್ರದ ಮೇಲೆ ಒತ್ತಡ ಹೇರಬೇಕು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆಗ್ರಹಿಸಿದರು.

ಈ ಬಗ್ಗೆ ಬಿಜೆಪಿಯೇತರ ಸರ್ಕಾರಗಳು ಇರುವ ರಾಜ್ಯಗಳಲ್ಲಿ ಸಾರ್ವಜನಿಕವಾಗಿ ಚರ್ಚೆಗಳು ನಡೆಯುತ್ತಿವೆ. ನಮ್ಮಲ್ಲೂ ಚರ್ಚೆಗಳು ನಡೆದು ಕೇಂದ್ರದ ಮೇಲೆ ಒತ್ತಡ ತರಬೇಕು ಎಂದು ಶನಿವಾರ ಸುದ್ದಿಗಾರರಿಗೆ ತಿಳಿಸಿದರು.

ಅತಿವೃಷ್ಟಿ, ಅನಾವೃಷ್ಟಿಯಿಂದ ರಾಜ್ಯ ತತ್ತರಿಸಿದ್ದು, ಪರಿಹಾರ ಕಾರ್ಯಗಳಿಗೂ ಹಣ ಇಲ್ಲವಾಗಿದೆ. ಆದರೂ ಈ ವಿಚಾರವನ್ನು ಯಡಿಯೂರಪ್ಪ ಅವರು ಜನರ ಮುಂದೆ ಹೇಳುತ್ತಿಲ್ಲ. ಕೇಂದ್ರದ ಮೇಲೂ ಒತ್ತಡ ತರುತ್ತಿಲ್ಲ ಎಂದರು.

ಈ ವಿಚಾರವನ್ನು ಕೋರ್ಟ್‌ನಲ್ಲಿ ಪ್ರಶ್ನಿಸುವುದಾಗಿ ಪಂಜಾಬ್ ಸರ್ಕಾರ ಹೇಳುತ್ತಿದೆ. ಅದೇ ಮಾದರಿಯನ್ನು ರಾಜ್ಯ ಸರ್ಕಾರ ಅನುಸರಿಸಬೇಕು. ಕೇಂದ್ರದಿಂದ ಹಣ ಬರದಿದ್ದರೆ ಪರ್ಯಾಯವಾಗಿ ಯಾವ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ರಾಜ್ಯದ ಮುಂದಿಡ
ಬೇಕು ಎಂದು ಒತ್ತಾಯಿಸಿದರು.

ಆಗ್ರಹ: ‘ಲಿಂಗಾಯತರ ಮತಗಳನ್ನು ಕೇಳುವುದರಲ್ಲಿ ತಪ್ಪೇನಿದೆ’ ಎಂದು ಸಚಿವರಾದ ಕೆ.ಎಸ್.ಈಶ್ವರಪ್ಪ, ಜೆ.ಸಿ.ಮಾಧುಸ್ವಾಮಿ ಸಮರ್ಥಿಸಿಕೊಳ್ಳುತ್ತಿದ್ದಾರೆ. ಆಯೋಗ ಜೀವಂತವಾಗಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್‌ ಮುಖಂಡರಾದ ಉಗ್ರಪ್ಪ, ಪ್ರಕಾಶ್ ರಾಠೋಡ್ ಆಗ್ರಹಿಸಿದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು