ಭಾನುವಾರ, ಸೆಪ್ಟೆಂಬರ್ 19, 2021
24 °C

ಜನರ ನೆರವಿಗೆ ಧಾವಿಸದ ಬಿಜೆಪಿ: ವಿಧಾನ ಪರಿಷತ್ ಸದಸ್ಯ ಯು.ಬಿ. ವೆಂಕಟೇಶ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಕೋವಿಡ್‌ ನಿಯಂತ್ರಣಕ್ಕಾಗಿ ಲಾಕ್‌ಡೌನ್ ಜಾರಿ ಮಾಡಿದ ಸಂದರ್ಭದಲ್ಲಿ ಬಿಜೆಪಿ ಸರ್ಕಾರವು ಜನರ ನೆರವಿಗೆ ಧಾವಿಸಲಿಲ್ಲ’ ಎಂದು ವಿಧಾನ ಪರಿಷತ್ ಸದಸ್ಯ ಯು.ಬಿ. ವೆಂಕಟೇಶ್ ಆರೋಪಿಸಿದರು.

ಶ್ರೀನಗರದ ಕಾಳಪ್ಪ ಬ್ಲಾಕ್‌ನಲ್ಲಿ ಬಡವರಿಗೆ ಆಹಾರ ಪದಾರ್ಥ ಹಾಗೂ ತರಕಾರಿ ಕಿಟ್ ವಿತರಿಸಿ ಮಾತನಾಡಿದ ಅವರು, ‘ರಾಜ್ಯ ಸರ್ಕಾರ ನಿರ್ಲಕ್ಷ್ಯ ವಹಿಸಿದ ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಮುಂದೆ ಬಂದು ಆಹಾರ ಪದಾರ್ಥ ಸೇರಿದಂತೆ ಕೆಲವು ಅಗತ್ಯ ವಸ್ತುಗಳನ್ನು ವಿತರಿಸಿ ಬಡವರಿಗೆ ನೆರವಾಯಿತು’ ಎಂದರು.

ಸಂಕಷ್ಟಕ್ಕೆ ಒಳಗಾದ ಜನರಿಗೆ  ₹10 ಸಾವಿರ ನೆರವು ನೀಡಬೇಕು ಎಂದು ಕಾಂಗ್ರೆಸ್ ಪಕ್ಷ ಒತ್ತಾಯಿಸುತ್ತಾ ಬಂದಿದೆ. ಆದರೆ, ಕೆಲವರಿಗೆ ₹2 ಸಾವಿರದಿಂದ ₹3 ಸಾವಿರ ಮಾತ್ರ ಪರಿಹಾರ ಘೋಷಣೆ ಮಾಡಲಾಗಿದೆ. ಈ ಮೊತ್ತ ಬೆಂಗಳೂರಿನಂತಹ ನಗರದಲ್ಲಿ ವಾಸಿಸುವವರಿಗೆ ಸಾಕಾಗುತ್ತದೆಯೇ’ ಎಂದು ಅವರು ಪ್ರಶ್ನಿಸಿದರು.

‘ಎಲ್ಲರೂ ಕಡ್ಡಾಯವಾಗಿ ಲಸಿಕೆಯನ್ನು ಪಡೆಯಬೇಕು. ಲಸಿಕೆ ಸಿಗದೇ ಇದ್ದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಮೂಲಕ ಲಸಿಕೆ ಕೊಡಿಸುವ ಕೆಲಸ ಮಾಡಲಾಗುವುದು’ ಎಂದೂ ಹೇಳಿದರು. 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು