ಜೋಪಡಿ ನೆಲಸಮ ಸ್ಥಳಕ್ಕೆ ಕಾಂಗ್ರೆಸ್ ಮುಖಂಡರ ಭೇಟಿ

ಬೆಂಗಳೂರು: ಅನಧಿಕೃತವಾಗಿ ಕಾರ್ಮಿಕರ ಜೋಪಡಿಗಳನ್ನು ನೆಲಸಮ ಮಾಡಿದ ಸ್ಥಳಕ್ಕೆ ಕಾಂಗ್ರೆಸ್ ಮುಖಂಡರು ಗುರುವಾರ ಭೇಟಿ ನೀಡಿದರು.
ದೇವರಬಿಸನಹಳ್ಳಿಯ ಕರಿಯಮ್ಮನ ಅಗ್ರಹಾರದ ಮಂತ್ರಿ ಇಸ್ಪನ್ ಅಪಾರ್ಟ್‌ಮೆಂಟ್ ಸಮುಚ್ಚಯಕ್ಕೆ ಹೊಂದಿಕೊಂಡಿ
ರುವ ಖಾಲಿ ಜಾಗದಲ್ಲಿ 300ಕ್ಕೂ ಹೆಚ್ಚು ಜೋಪಡಿಗಳು ಇದ್ದವು. ಏಕಾಏಕಿ 80ಕ್ಕೂ ಹೆಚ್ಚು ಜೋಪಡಿಗಳನ್ನು ಕೆಡವಲಾಗಿದ್ದು, ಅಲ್ಲಿ ವಾಸವಿದ್ದ ಉತ್ತರ ಕರ್ನಾಟಕ ಹಾಗೂ ಉತ್ತರ ಭಾರತದ ನೂರಾರು ಕಾರ್ಮಿಕರ ಕುಟುಂಬಗಳು ಬೀದಿಗೆ ಬಿದ್ದಿವೆ.
ಸ್ಥಳಕ್ಕೆ ಭೇಟಿ ನೀಡಿ ಕಾರ್ಮಿಕರ ಅಳಲು ಆಲಿಸಿದ ಕಾಂಗ್ರೆಸ್ ಮುಖಂಡರು, ಅನಧಿಕೃತವಾಗಿ ಜೋಪಡಿ ಕೆಡವಿದ ಬಿಬಿಎಂಪಿ ಅಧಿಕಾರಿಗಳು ಹಾಗೂ ಪೊಲೀಸರ ವಿರುದ್ಧ ಹರಿಹಾಯ್ದರು.
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ‘ಬಾಂಗ್ಲಾ ವಲಸಿಗರೆಂಬ ಪಟ್ಟ ಕಟ್ಟಿ ಉತ್ತರ ಕರ್ನಾಟಕ ಹಾಗೂ ಉತ್ತರ ಭಾರತದ ಕಾರ್ಮಿಕರ ಜೋಪಡಿಗಳನ್ನು ನೆಲಸಮ ಮಾಡಿರುವ ಅಧಿಕಾರಿಗಳ ವರ್ತನೆ ಅಮಾನವೀಯ. ಕಾರ್ಮಿಕರಿಗೆ ತೊಂದರೆ ನೀಡಿರುವ ತಪ್ಪಿತಸ್ಥರ ವಿರುದ್ಧ ಮುಖ್ಯಮಂತ್ರಿಯವರು ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.
ಭೇಟಿ ವೇಳೆ ಶಾಸಕರಾದ ರಾಮಲಿಂಗಾ ರೆಡ್ಡಿ ಹಾಗೂ ರಿಜ್ವಾನ್ ಅರ್ಷದ್ ಅವರೂ ಸಂತ್ರಸ್ತರಿಗೆ ಸಾಂತ್ವನ ಹೇಳಿದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.