ಶುಕ್ರವಾರ, ಅಕ್ಟೋಬರ್ 23, 2020
27 °C

‘ಕಾಂಗ್ರೆಸ್‌ನಿಂದ ಬಡವರ ಪರ ಕೆಲಸ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಉಚಿತ ವಸತಿ, ನಿವೇಶನ, ಅನ್ನಭಾಗ್ಯ, ಕ್ಷೀರಭಾಗ್ಯದಂತಹ ಹಲವಾರು ಯೋಜನೆಗಳನ್ನು ಆರಂಭಿಸಿದ ಕಾಂಗ್ರೆಸ್ ಪಕ್ಷ ಸದಾ ಬಡವರ, ರೈತರ, ಕಾರ್ಮಿಕರ ಪರವಾಗಿ ದುಡಿಯುತ್ತಿರುವ ಪಕ್ಷ. ಮುಂದೆಯೂ ಕ್ಷೇತ್ರದ ಅಭಿವೃದ್ಧಿಗಾಗಿ ನಿಮ್ಮ ಮಗಳಿಗೆ ಮತ ನೀಡಿ ಬೆಂಬಲಿಸಿ’ ಎಂದು ಕಾಂಗ್ರೆಸ್ ಅಭ್ಯರ್ಥಿ ಎಚ್.ಕುಸುಮಾ ಮನವಿ ಮಾಡಿದರು.

ಆರ್‌.ಆರ್‌. ನಗರ ವಿಧಾನಸಭಾ ಕ್ಷೇತ್ರದ ಚನ್ನಸಂದ್ರ, ಬೆಮೆಲ್ ಲೇಔಟ್, ಹಲಗೇವಡೇರಹಳ್ಳಿ, ಐಡಿಯಲ್ ಹೋಮ್ಸ್ ಪ್ರದೇಶಗಳಲ್ಲಿ ಶನಿವಾರ ಮನೆ ಮನೆಗೆ ತೆರಳಿ ಮತಯಾಚನೆ ನಡೆಸಿದರು.

‘ಕ್ಷೇತ್ರದಲ್ಲಿ ಸಮಾನತೆ, ಅಭಿವೃದ್ಧಿ ಕಾಣಲು ಜನ ಬಯಸುತ್ತಿದ್ದಾರೆ. ಅವರು ನನ್ನನ್ನು ಬೆಂಬಲಸುತ್ತಾರೆ ಮೆಂಬ ನಂಬಿಕೆ ಇದೆ’ ಎಂದು ಸುದ್ದಿಗಾರರಿಗೆ ತಿಳಿಸಿದರು.
ಬೆಂಗಳೂರು ಉತ್ತರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ರಾಜ್‍ಕುಮಾರ್, ಕಾಂಗ್ರೆಸ್ ಮುಖಂಡ ಹನುಮಂತರಾಯಪ್ಪ ಚುನಾವಣಾ ಪ್ರಚಾರದ ವೇಳೆ ಜೊತೆಯಲ್ಲಿದ್ದರು.

ಚಂದ್ರಶೇಖರ್‌ಗೆ ಕಾಂಗ್ರೆಸ್‌ ಗಾಳ?

ಜೆಡಿಎಸ್ ವರಿಷ್ಠರಾದ ಎಚ್.ಡಿ.ದೇವೇಗೌಡ ಹಾಗೂ ಎಚ್.ಡಿ.ಕುಮಾರಸ್ವಾಮಿ ಅವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದ ಬಿ.ಎಚ್.ಚಂದ್ರಶೇಖರ್ ಅವರ ಜೊತೆ ಕಾಂಗ್ರೆಸ್ ಮುಖಂಡ ಹನುಮಂತರಾಯಪ್ಪ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಮ್.ರಾಜ್‍ಕುಮಾರ್ ಶನಿವಾರ ಚರ್ಚೆ ನಡೆಸಿದರು.

ಚಂದ್ರಶೇಖರ್ ಅವರು ರಾಜ್ಯ ಯುವ ಜೆ.ಡಿ.ಎಸ್. ಘಟಕದ ಕಾರ್ಯಾಧ್ಯಕ್ಷ
ರಾಗಿಯೂ ಕಾರ್ಯ ನಿರ್ವಹಿಸಿದ್ದರು.

ಚಂದ್ರಶೇಖರ್ ಹಾಗೂ ಕೆಲವು ಜೆಡಿಎಸ್ ಮುಖಂಡರು ತಮ್ಮ ಬೆಂಬಲಿಗರ ಜೊತೆ ಶೀಘ್ರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನ ಸಭೆಯ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ, ಸಂಸದ ಡಿ.ಕೆ.ಸುರೇಶ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ಪಕ್ಷದ ಸ್ಥಳೀಯ ಮುಖಂಡರು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.