ಶನಿವಾರ, ಜುಲೈ 31, 2021
25 °C
ಪ್ರಜಾವಾಣಿ ವಾರ್ತೆ

ಯಲಹಂಕ ಕಾಂಗ್ರೆಸ್‌ ಕಾರ್ಯಕರ್ತನ ಕೊಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಯಲಹಂಕ ವ್ಯಾಪ್ತಿ ಪಾಲನಹಳ್ಳಿ ಬಳಿ ಕಾಂಗ್ರೆಸ್‌ ಕಾರ್ಯಕರ್ತ ಚನ್ನಕೇಶವ (45) ಎಂಬುವರನ್ನು ಮಾರಕಾಸ್ತ್ರಗಳಿಂದ ಕೊಲೆ ಮಾಡಿರುವ ಘಟನೆ ಗುರುವಾರ ರಾತ್ರಿ 10.30ಕ್ಕೆ ನಡೆದಿದೆ.

ಪ್ರತಿಷ್ಠಿತ ಅಪಾರ್ಟ್‌ಮೆಂಟ್‌ವೊಂದರ ಮುಂದೆ ಚನ್ನಕೇಶವ ತನ್ನ ಬೈಕ್‌ನಲ್ಲಿ ಕುಡಿಯುತ್ತಾ ಕುಳಿತಿದ್ದಾಗ ಅಪರಿಚಿತರು ಮಚ್ಚು, ಲಾಂಗುಗಳಿಂದ ಹೊಡೆದು ಕೊಲೆ ಮಾಡಿದ್ದಾರೆ ಎಂದು ಡಿಸಿಪಿ ಭೀಮಾಶಂಕರ ಗುಳೇದ್‌ ತಿಳಿಸಿದರು.

ಸ್ಥಳೀಯವಾಗಿ ನಾಯಕತ್ವದ ಗುಣ ಬೆಳೆಸಿಕೊಂಡಿದ್ದ ಚನ್ನಕೇಶವ ಹಲವು ಕಾರ್ಯಕ್ರಮಗಳನ್ನು ಸಂಘಟಿಸಿದ್ದರು. ಟ್ಯಾಂಕರ್‌ ಮೂಲಕ ನೀರು ಪೂರೈಕೆ ಮಾಡುತ್ತಿದ್ದರು. ಇನ್ನು ಕೆಲ ವ್ಯವಹಾರ ನಡೆಸುತ್ತಿದ್ದರು. ವೈಯಕ್ತಿಕ ದ್ವೇಷ ಕೊಲೆಗೆ ಕಾರಣವೇ ಅಥವಾ ರಾಜಕೀಯ ಕಾರಣವಿದೆಯೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ ಎಂದು ಅವರು ಹೇಳಿದರು.

ಯಲಹಂಕ ಎಸಿಪಿ ಹಾಗೂ ಇನ್‌ಸ್ಪೆ‌ಕ್ಟರ್‌ ನೇತೃತ್ವದಲ್ಲಿ ಎರಡು ವಿಶೇಷ ತಂಡ ರಚಿಸಲಾಗಿದೆ. ಆರೋಪಿಗಳನ್ನು ಶೀಘ್ರವೇ ಬಂಧಿಸುವ ವಿಶ್ವಾಸವಿದೆ ಎಂದೂ ಅವರು ವಿವರಿಸಿದರು. ಯಲಹಂಕ ಪೊಲೀಸ್‌ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು