ಸೋಮವಾರ, 11 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಎಸ್‌ಆರ್‌ ಅನುದಾನ ವೆಚ್ಚಕ್ಕೆ ಮುನ್ನ ಅನುಮತಿ ಅಗತ್ಯ

Published 29 ಸೆಪ್ಟೆಂಬರ್ 2023, 15:53 IST
Last Updated 29 ಸೆಪ್ಟೆಂಬರ್ 2023, 15:53 IST
ಅಕ್ಷರ ಗಾತ್ರ

ಬೆಂಗಳೂರು: ಕೈಗಾರಿಕಾ ಸಂಸ್ಥೆಗಳ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (ಸಿಎಸ್‌ಆರ್) ಅನುದಾನದಡಿ ಕೈಗೊಳ್ಳುವ ಯಾವುದೇ ಕಾಮಗಾರಿಗೆ ಜಿಲ್ಲಾಡಳಿತದಿಂದ ಮೊದಲು ಅನುಮತಿ ಪಡೆದುಕೊಳ್ಳಬೇಕು ಎಂದು ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುತ್ತೋಲೆ ಹೊರಡಿಸಿದ್ದಾರೆ.

ಜಿಲ್ಲಾಡಳಿತದಿಂದ ಪೂರ್ವಾನುಮತಿ ಪಡೆಯದೆ, ನಿಯಮ ಉಲ್ಲಂಘಿಸಿ ಸಿಎಸ್‌ಆರ್‌ ಅನುದಾನದಲ್ಲಿ ಕಾಮಗಾರಿಗಳನ್ನು ಕೈಗೊಂಡಿರುವುದು ಕಂಡು ಬಂದಿದೆ. ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಂದ ಅನುಮೋದನೆ ಪಡೆದು ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗಿದೆ. ಆದ್ದರಿಂದ, ಇನ್ನು ಮುಂದೆ ಸಕ್ಷಮ ಪ್ರಾಧಿಕಾರದಿಂದ ಅನುಮೋದನೆ ಪಡೆಯದಿರುವ ಯಾವುದೇ ಕಾಮಗಾರಿಗಳನ್ನು ಕೈಗೊಳ್ಳಬಾರದು ಎಂದು ಸೂಚಿಸಲಾಗಿದೆ.

ಪಂಚಾಯತ್‌ರಾಜ್‌ ಎಂಜಿನಿಯರಿಂಗ್‌ ವಿಭಾಗದ ಕಾರ್ಯಪಾಲಕ ಎಂಜಿನಿಯರ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್, ಬೆಂಗಳೂರು ದಕ್ಷಿಣ, ಉತ್ತರ, ಪೂರ್ವ, ಯಲಹಂಕ ಮತ್ತು ಆನೇಕಲ್‌ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ನಗರ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ 86 ಗ್ರಾಮ ಪಂಚಾಯಿತಿಗಳ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಎಲ್ಲ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಈ ಸುತ್ತೋಲೆಯನ್ನು ರವಾನಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT