ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಯುಜಿಸಿ ನಿಯಮ ಪರಿಗಣಿಸಿ’

Last Updated 31 ಜನವರಿ 2023, 18:37 IST
ಅಕ್ಷರ ಗಾತ್ರ

ಬೆಂಗಳೂರು: ‘ಸರ್ಕಾರಿ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡುವಾಗ ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ನಿಗದಿಪಡಿಸಿರುವ ಕನಿಷ್ಠ ಶೈಕ್ಷಣಿಕ ಅರ್ಹತೆ ಸೇರಿದಂತೆ ಎಲ್ಲ ನಿಯಮಾವಳಿಗಳನ್ನು ಪರಿಗಣಿಸಿಯೇ ನೇಮಕ ಮಾಡಿಕೊಳ್ಳಬೇಕು’ ಎಂದು ಹೈಕೋರ್ಟ್ ನಿರ್ದೇಶಿಸಿದೆ.

ಬಂಟ್ವಾಳದ ಕೆ.ವಿ.ರಂಜಿತ್ ನಾಯಕ್ ಸೇರಿದಂತೆ 50ಕ್ಕೂ ಹೆಚ್ಚು ಅರ್ಜಿದಾರರು ಸಲ್ಲಿಸಿದ್ದ ರಿಟ್‌ ಅರ್ಜಿಗಳನ್ನು ವಿಲೇವಾರಿ ಮಾಡಿದ ನ್ಯಾಯಮೂರ್ತಿ ಬಿ.ಎಂ.ಶ್ಯಾಮ್ ಪ್ರಸಾದ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.

‘ಯುಜಿಸಿ ನಿಗದಿಪಡಿಸಿದ ಕನಿಷ್ಠ ಶೈಕ್ಷಣಿಕ ಅರ್ಹತೆ ಇಲ್ಲದಿದ್ದ ಅಭ್ಯರ್ಥಿಗಳೂ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಸಲ್ಲಿಸಬಹುದು’ ಎಂದು ಸರ್ಕಾರವು ಆದೇಶ ಹೊರಡಿಸಿತ್ತು. ಅರ್ಜಿದಾರರು ಈ ಆದೇಶವನ್ನು ಪ್ರಶ್ನಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT