ಬೆಂಗಳೂರು: ವೈಟ್‌ಫೀಲ್ಡ್ ರೈಲ್ವೆ ನಿಲ್ದಾಣದಲ್ಲಿ ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ಕಾನ್‌ಸ್ಟೆಬಲ್ ಕಿರಣ್‌ಕುಮಾರ್ ಗುರ್ಜಾರ್ (30) ಎಂಬುವರಿಗೆ ಯುವಕನೊಬ್ಬ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ.

ಘಟನೆ ಸಂಬಂಧ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಕಿರಣ್‌ಕುಮಾರ್ ಜೂನ್ 2ರಂದು ರಾತ್ರಿ ಗಸ್ತು ಕರ್ತವ್ಯದಲ್ಲಿದ್ದರು. ತಡರಾತ್ರಿ ನಿಲ್ದಾಣದ ಟಿಕೆಟ್ ಕೌಂಟರ್ ಎದುರು ಮೂವರು ಯುವಕರು, ಇಬ್ಬರು ಯುವತಿಯರ ಜೊತೆ ಅಸಭ್ಯವಾಗಿ ನಡೆದುಕೊಳ್ಳುತ್ತಿದ್ದರು. ಸ್ಥಳಕ್ಕೆ ಹೋಗಿದ್ದ ಕಿರಣ್‌ಕುಮಾರ್, ಬುದ್ಧಿವಾದ ಹೇಳಿ ಯುವತಿಯರನ್ನು ಸ್ಥಳದಿಂದ ಕಳುಹಿಸಿದ್ದರು’ ಎಂದು ಪೊಲೀಸರು ಹೇಳಿದರು.

‘ಆದರೆ, ಸ್ಥಳದಿಂದ ಹೋಗದ ಯುವಕರು ಜಗಳ ತೆಗೆದಿದ್ದರು. ಒಬ್ಬಾತ ಚಾಕುವಿನಿಂದ ಕಿರಣ್‌ಕುಮಾರ್ ಅವರ ಕೈಗೆ ಇರಿದಿದ್ದ. ನಿಲ್ದಾಣದಲ್ಲಿದ್ದ ಸಿಬ್ಬಂದಿಯನ್ನು ರಕ್ಷಣೆಗಾಗಿ ಕೂಗಾಡುತ್ತಿದ್ದಂತೆ ಆರೋಪಿಗಳು ಸ್ಥಳದಿಂದ ಓಡಿಹೋಗಿದ್ದಾರೆ. ಗಾಯಗೊಂಡ ಕಾನ್‌ಸ್ಟೆಬಲ್ ಚಿಕಿತ್ಸೆ ಪಡೆದಿದ್ದಾರೆ’ ಎಂದೂ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.